ಮಂಗಳವಾರ, ನವೆಂಬರ್ 19, 2019
29 °C

14ರಂದು ಹಿಂದಿ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ

Published:
Updated:

ಚಾಮರಾಜನಗರ: ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ರಾಜ್ಯ ಮಟ್ಟದ ‘ಶೈಕ್ಷಣಿಕ ಸಮ್ಮೇಳನ’ ಮತ್ತು ‘ಹಿಂದಿ ದಿವಸ್‌’ ಕಾರ್ಯಕ್ರಮ ಇದೇ 14ರಂದು ನಗರದ ನಂದಿ ಭವನ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. 

ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಶರ್ಮನ್‌ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. 

‘ಪ್ರತಿ ವರ್ಷ ಜಿಲ್ಲಾ ಕೇಂದ್ರದಲ್ಲಿ ಶೈಕ್ಷಣಿಕ ಸಮ್ಮೇಳನ ನಡೆಯುತ್ತಿದೆ. ಮೈಸೂರು ವಿಭಾಗದಲ್ಲಿ ಮೊದಲ ಬಾರಿಗೆ ನಮ್ಮಲ್ಲೇ ನಡೆಯುತ್ತಿದ್ದು, ಇದು ಆರನೇ ಸಮ್ಮೇಳನ’ ಎಂದರು. 

‘ಬದಲಾಗುತ್ತಿರುವ ಪಠ್ಯಕ್ರಮ ಹಾಗೂ ಹಿಂದಿ ಶಿಕ್ಷಕರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಅಂದು ಚರ್ಚಿಸಲಾಗುತ್ತದೆ. ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸಗಳೂ ಇರುತ್ತವೆ’ ಎಂದರು.

‘ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಂಸದರು ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ ಇತರೆ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ರಾಜ್ಯದ ವಿವಿಧ ಕಡೆಗಳಿಂದ 1000ಕ್ಕೂ ಹೆಚ್ಚು ಹಿಂದಿ ಶಿಕ್ಷಕರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು. 

ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹಾದೇವ ಎನ್‌., ಉಪಾಧ್ಯಕ್ಷ ಕೃಷ್ಣ ಸಾ.ಬಾಕಳೆ, ರಾಜ್ಯ ಪ್ರತಿನಿಧಿ ಡಾ.ಅರುಣ್‌ ಕುಮಾರ್‌ ಎಸ್‌., ಚಾಮರಾಜನಗರ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಸನ್ನಕುಮಾರ್‌ ಇದ್ದರು.

ಪ್ರತಿಕ್ರಿಯಿಸಿ (+)