ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಥಳಿತ

ಶುಕ್ರವಾರ, ಏಪ್ರಿಲ್ 26, 2019
35 °C

ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಥಳಿತ

Published:
Updated:

ಬೆಂಗಳೂರು: ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಖಾಸಗಿ ಕಂಪನಿ ಉದ್ಯೋಗಿ ಹರಿಶಂಕರ್ (28) ಎಂಬಾತನನ್ನು ಸ್ಥಳೀಯರೇ ಥಳಿಸಿ ಹುಳಿಮಾವು ಪೊಲೀಸರ ವಶಕ್ಕೆ ಕೊಟ್ಟಿದ್ದಾರೆ. 

ಶುಕ್ರವಾರ ಸಂಜೆ 7 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ‘ಲೈಂಗಿಕ ಕಿರುಕುಳ (ಐಪಿಸಿ 354) ಆರೋಪದಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ. ಮದ್ಯದ ಅಮಲಿನಲ್ಲಿ ಆ ರೀತಿ ವರ್ತಿಸಿದ್ದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಹುಳಿಮಾವು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆ ಕೂಡ ಒಡಿಶಾದವರಾಗಿದ್ದು, ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ನೆಲೆಸಿದ್ದ ಕಟ್ಟಡದ 2ನೇ ಮಹಡಿಯ ಮನೆಯಲ್ಲೇ ಹರಿಶಂಕರ್ ಕುಟುಂಬ ವಾಸವಿದೆ. ತಮ್ಮ ರಾಜ್ಯದವರು ಎಂಬ ಕಾರಣಕ್ಕೆ ಸಂತ್ರಸ್ತೆ ಅವರನ್ನೆಲ್ಲ ಸಲುಗೆಯಿಂದಲೇ ಮಾತನಾಡಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !