ಬಾಲಕಿ ಮೇಲೆ ಅತ್ಯಾಚಾರ

ಬುಧವಾರ, ಜೂನ್ 19, 2019
22 °C

ಬಾಲಕಿ ಮೇಲೆ ಅತ್ಯಾಚಾರ

Published:
Updated:

ಬೆಂಗಳೂರು: ಪೋಷಕರ ಜೊತೆ ನಗರದಲ್ಲಿ ನೆಲೆಸಿದ್ದ 17 ವರ್ಷದ ಬಾಲಕಿಯನ್ನು ಜಾತ್ರೆಗೆಂದು ತುಮಕೂರಿಗೆ ಕರೆದೊಯ್ದಿದ್ದ ಸಂಬಂಧಿಯೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಆ ಸಂಬಂಧ ಎಚ್‌ಎಎಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬಾಲಕಿಯು ಇತ್ತೀಚೆಗೆ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಪೋಷಕರು ವೈದ್ಯರ ಬಳಿ ತೋರಿಸಿದಾಗ, ಆಕೆ ಒಂದು ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಾಲಕಿಯನ್ನು ವಿಚಾರಿಸಿದಾಗ ತನ್ನ ಮೇಲೆ ಸಂಬಂಧಿಯೇ ಅತ್ಯಾಚಾರ ಎಸಗಿರುವ ಮಾಹಿತಿ ತಿಳಿಸಿದ್ದಾಳೆ. ನಂತರ ಪೋಷಕರು, ಠಾಣೆಗೆ ಬಂದು ಸಂಬಂಧಿ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆತ ತಲೆಮರೆಸಿಕೊಂಡಿದ್ದಾನೆ’ ಎಂದು ಮಾಹಿತಿ ನೀಡಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !