ಮಾನವನ ಕೃತ್ಯದಿಂದ ಅಂತರ್ಜಲ ಬರಿದು

7

ಮಾನವನ ಕೃತ್ಯದಿಂದ ಅಂತರ್ಜಲ ಬರಿದು

Published:
Updated:
Prajavani

ವಿಜಯಪುರ: ಅಂತರ್ಜಲ ಭೂ ವಿಜ್ಞಾನ ಇಲಾಖೆ ವತಿಯಿಂದ ಕೊಲ್ಹಾರ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂತರ್ಜಲ ಜಾಗೃತಿ ಶಿಬಿರಕ್ಕೆ ಬಸವನಬಾಗೇವಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಗುಳೇದಗುಡ್ಡ ಚಾಲನೆ ನೀಡಿದರು.

ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ವಿಮಲಾ ಹಂದಿಗೋಳ ಮಾತನಾಡಿ, ‘ಮಾನವನ ಕೃತ್ಯದಿಂದ ಪ್ರಸಕ್ತ ದಿನಗಳಲ್ಲಿ ಅಂತರ್ಜಲ ಬರಿದಾಗುತ್ತಿದೆ. ಇದು ಮುಂಬರುವ ದಿನಗಳಲ್ಲಿ ದುಷ್ಪರಿಣಾಮ ಬೀರಲಿದೆ. ಹೀಗಾಗಿ ಪ್ರತಿಯೊಂದು ಶಾಲೆಯಲ್ಲಿ ಮಕ್ಕಳಿಗೆ ಅಂತರ್ಜಲ ಸಂರಕ್ಷಣೆ ಕುರಿತು ಮಾಹಿತಿ ನೀಡುವ ಮೂಲಕ, ಪ್ರತಿ ಕುಟುಂಬಕ್ಕೆ ವಿಷಯದ ಗಂಭೀರತೆ ತಲುಪಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ’ ಎಂದರು.

ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು. ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಡಾ.ಬಾಬು ಸಜ್ಜನ ಸ್ವಾಗತಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !