ಸೋಮವಾರ, ಅಕ್ಟೋಬರ್ 14, 2019
24 °C

ಅಮೆರಿಕ: ಗುಂಡಿನ ದಾಳಿಗೆ ನಾಲ್ವರು ಬಲಿ

Published:
Updated:

ಕಾನ್ಸಾಸ್‌ ಸಿಟಿ, ಅಮೆರಿಕ: ಇಲ್ಲಿನ ಬಾರ್‌ವೊಂದಕ್ಕೆ ನುಗ್ಗಿದ ಬಂದೂಕುಧಾರಿ ಆಗಂತುಕ ಗುಂಡಿನ ಮಳೆಗರೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ.  

ಇಲ್ಲಿನ ಟಿಕ್ವಿಲಾ ಕೆಸಿ ಬಾರ್‌ನಲ್ಲಿ ಭಾನುವಾರ ಮುಂಜಾನೆ 1.30ರ ಸುಮಾರು ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆ ದಾಖಲಾಗಿದೆ.

‘ಬಾರ್‌ಗೆ ನುಗ್ಗಿದ ಅಪರಿಚಿತ ವ್ಯಕ್ತಿ ಗುಂಡು ಹಾರಿಸಲು ಆರಂಭಿಸಿದ್ದಾನೆ. ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟರೆ, ತೀವ್ರ ಗಾಯಗೊಂಡಿದ್ದ ಐವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. 

ಘಟನೆ ಸಂಬಂಧ ಯಾರನ್ನೂ ಬಂಧಿಸಿಲ್ಲ. ಕಾನ್ಸಾಸ್‌ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.  

 

Post Comments (+)