ಇಂಡೊನೇಷ್ಯಾದಲ್ಲಿ ಗಲಭೆ: ಆರು ಮಂದಿ ಸಾವು

ಮಂಗಳವಾರ, ಜೂನ್ 18, 2019
23 °C

ಇಂಡೊನೇಷ್ಯಾದಲ್ಲಿ ಗಲಭೆ: ಆರು ಮಂದಿ ಸಾವು

Published:
Updated:
Prajavani

ಜಕಾರ್ತ: ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಬಹಿರಂಗಗೊಂಡ ಬಳಿಕ ಇಂಡೊನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ನಡೆದ ಗಲಭೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೂತನ ಅಧ್ಯಕ್ಷರಾಗಿ ಜೋಕೊ ವಿಡೊಡೊ ಪುನರಾಯ್ಕೆಯಾದ ಬಳಿಕ ಪ್ರತಿಸ್ಪರ್ಧಿ ಪ್ರಬೊವೊ ಸುಬಿಯಾಂತೊ ಬೆಂಬಲಿಗರು ಪೊಲೀಸರ ಜೊತೆ ಘರ್ಷಣೆಗಿಳಿದಿದ್ದರು. ವಾಹನಗಳಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.

ಚುನಾವಣಾ ಮೇಲ್ವಿಚಾರಣಾ ಸಂಸ್ಥೆಯ ಕಚೇರಿಗೂ ಪ್ರತಿಭಟನಕಾರರು ನುಗ್ಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಜಲ ಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ.

ಏಪ್ರಿಲ್‌ 17ರಂದು ನಡೆದಿದ್ದ ಚುನಾವಣೆಯಲ್ಲಿ ಭಾರಿ ಪ್ರಮಾಣದಲ್ಲಿ ವಂಚನೆ ನಡೆದಿದೆ ಎಂದು ಪ್ರಬೊವೊ ಸುಬಿಯಾಂತೊ ಆರೋಪಿಸಿದ್ದರು.

ಗಲಭೆಯ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿಗಳು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್‌, ಟ್ವಿಟ್ಟರ್‌ ಮತ್ತು ವಾಟ್ಸ್‌ಆ್ಯಪ್‌ಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗುವುದು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರುದಿಯಾಂತರ ಹೇಳಿದ್ದಾರೆ.

‘ಗಲಭೆಯು ಪೂರ್ವಯೋಜಿತವಾಗಿ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಗಲಭೆ ನಡೆದ ಜಕಾರ್ತದಲ್ಲಿ ಭದ್ರತೆಗಾಗಿ 50ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !