ಅಮಾನತು ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಎಸ್.ಮೂರ್ತಿ

7

ಅಮಾನತು ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಎಸ್.ಮೂರ್ತಿ

Published:
Updated:
Prajavani

ಬೆಂಗಳೂರು: ವಿಧಾನಸಭೆ ಸಚಿವಾಲಯದ ವಿಶೇಷ ಮಂಡಳಿ ಹೊರಡಿಸಿರುವ ಅಮಾನತು ಆದೇಶ ಪ್ರಶ್ನಿಸಿ ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿಯಲ್ಲಿ ವಿಧಾನಸಭೆ ಸಚಿವಾಲಯದ ವಿಶೇಷ ಮಂಡಳಿ, ವಿಧಾನಸಭಾ ಅಧ್ಯಕ್ಷರು ಹಾಗೂ ವಿಧಾನಸಭೆಯ ಹೆಚ್ಚುವರಿ ಕಾರ್ಯದರ್ಶಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಹೈಕೋರ್ಟ್ ವೆಬ್‌ಸೈಟ್‌ ಮಾಹಿತಿ ಪ್ರಕಾರ ಜನವರಿ 3ರಂದು ಅರ್ಜಿ ದಾಖಲಿಸಲಾಗಿದೆ. ರಿಟ್‌ ಪಿಟಿಷನ್‌ ಸಂಖ್ಯೆ 537/2019.

‘2016 ಹಾಗೂ 2017ನೇ ಸಾಲಿನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದ ಕಾಮಗಾರಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ’ ಎಂಬ ಆರೋಪದ ಮೇರೆಗೆ ಮೂರ್ತಿ ಅವರನ್ನು 2018ರ ಡಿ.27ರಂದು ಅಮಾನತುಗೊಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !