ಭಾನುವಾರ, ನವೆಂಬರ್ 17, 2019
28 °C
ಹಿರಿಯ ‍ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ತೆರೆ

ಸಂಜು, ವಿನುತಾಗೆ ವೈಯಕ್ತಿಕ ಪ್ರಶಸ್ತಿ

Published:
Updated:
Prajavani

ಚಾಮರಾಜನಗರ: ನಗರದ ಜಿಲ್ಲಾಕ್ರೀಡಾಂಗಣದಲ್ಲಿ ನಡೆದ 2 ದಿನಗಳ ಹಿರಿಯ ‍ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಶುಕ್ರವಾರ ತೆರೆ ಬಿತ್ತು. 

ಶುಕ್ರವಾರ ನಡೆದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಅಥ್ಲೆಟಿಕ್ಸ್‌ನ ಬಾಲಕರ ವಿಭಾಗದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಂಜು ಹಾಗೂ ಬಾಲಕಿಯರ ವಿಭಾಗದಲ್ಲಿ ಹನೂರು ತಾಲ್ಲೂಕಿನ ಕೌದಳ್ಳಿಯ ಸಂತ ಅಂಥೋಣಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ವಿನುತಾ ಅವರು ವೈಯಕ್ತಿಕ ಪ್ರಶಸ್ತಿ ಗಳಿಸಿದರು. ‌

ಸಂಜು 400 ಮೀಟರ್‌ ಓಟ ಮತ್ತು ಉದ್ದ ಜಿಗಿತದಲ್ಲಿ ಮೊದಲ ಸ್ಥಾನ ಗಳಿಸಿದರೆ, ವಿನುತಾ ಉದ್ದ ಜಿಗಿತದಲ್ಲಿ ಮೊದಲ ಸ್ಥಾನ ಹಾಗೂ ಗುಂಡೆಸತದಲ್ಲಿ ದ್ವಿತೀಯ ಸ್ಥಾನ ಗಳಿಸಿ ವೈಯಕ್ತಿಕ ಪ್ರಶಸ್ತಿಗೆ ಮುತ್ತಿಕ್ಕಿದರು. 

ಪ್ರತಿಕ್ರಿಯಿಸಿ (+)