ಬೆಂಗಳೂರು: ಕರ್ನಾಟಕ ರಾಜ್ಯ ಬ್ಯಾಸ್ಕೆಟ್ಬಾಲ್ ಸಂಸ್ಥೆ ವತಿಯಿಂದ ಏಪ್ರಿಲ್ 13ರಿಂದ 18ರ ವರೆಗೆ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಯೂತ್ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ ನಡೆಯಲಿದೆ.
ಬಾಲಕರ 46 ಹಾಗೂ ಬಾಲಕಿಯರ 24 ತಂಡಗಳು ಈ ಟೂರ್ನಿಯಲ್ಲಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.
ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಗಳು ಜರುಗಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.