ಕೋಲ್ಕತ್ತ (ಪಿಟಿಐ): ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಏಷ್ಯನ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಅಥ್ಲೀಟ್ ಪಿಂಕಿ ಪ್ರಾಮಾಣಿಕ್ ಅವರಿಗೆ 25 ದಿನಗಳ ಬಳಿಕ ಜಾಮೀನು ಲಭಿಸಿದೆ.

`ಪಿಂಕಿ ಪುರುಷನಾಗಿದ್ದು ಆತ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ~ ಎಂದು ಮಹಿಳೆಯೊಬ್ಬರು ನೀಡಿದ್ದ ದೂರಿನ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಪಿಂಕಿ ಅವರನ್ನು ಜೂನ್ 14ರಂದು ಬಂಧಿಸಿದ್ದರು. 25 ದಿನಗಳಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಉತ್ತರ 24 ಪರಗಣ ಜಿಲ್ಲೆಯ ನ್ಯಾಯಾಲಯವು ಈ ಜಾಮೀನು ನೀಡಿದೆ. ಈಗಾಗಲೇ ಅವರನ್ನು ಲಿಂಗ ನಿರ್ಣಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ವರದಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.