ಕ್ರಿಕೆಟ್: ಬೂಮ್ರಾ, ಯಾದವ್‌ಗೆ ವಿಶ್ರಾಂತಿ

7

ಕ್ರಿಕೆಟ್: ಬೂಮ್ರಾ, ಯಾದವ್‌ಗೆ ವಿಶ್ರಾಂತಿ

Published:
Updated:
 ಉಮೇಶ್ ಯಾದವ್ ಹಾಗೂ ಜಸ್‌ಪ್ರೀತ್ ಬೂಮ್ರಾ

ಚೆನ್ನೈ: ವೆಸ್ಟ್ ಇಂಡೀಸ್ ಎದುರಿನ ಟ್ವೆಂಟಿ ಸರಣಿಯನ್ನು ಭಾರತವು ಈಗಾಗಲೇ 2–0ಯಿಂದ ಕೈವಶ ಮಾಡಿಕೊಂಡಿದೆ. ಆದ್ದರಿಂದ ಭಾನುವಾರ ಇಲ್ಲಿ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು  ಆತಿಥೇಯ ತಂಡವು ಯೋಜಿಸಿದೆ.

ಅದಕ್ಕಾಗಿ ಮಧ್ಯಮವೇಗಿಗಳಾದ ಉಮೇಶ್ ಯಾದವ್, ಜಸ್‌ಪ್ರೀತ್ ಬೂಮ್ರಾ ಮತ್ತು ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಅವರಿಗೆ ವಿಶ್ರಾಂತಿ ಕೊಡಲಾಗಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಕೆ.ಎಲ್. ರಾಹುಲ್, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್), ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ಕೀಪರ್), ಕೃಣಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್,  ಖಲೀಲ್ ಅಹಮದ್, ಶಾಬಾಜ್ ನದೀಮ್, ಸಿದ್ಧಾರ್ಥ್ ಕೌಲ್. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !