ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ವಿಶ್ವಕಪ್ ಗೆದ್ದು ಇಂದಿಗೆ 11 ವರ್ಷ: ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ

Last Updated 2 ಏಪ್ರಿಲ್ 2022, 7:20 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್‌ ತಂಡವು ಎಂ.ಎಸ್‌.ಧೋನಿ ಅವರ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದು ಇಂದಿಗೆ 11 ವರ್ಷಗಳು ಕಳೆದಿವೆ.

2011ರ ಏಪ್ರಿಲ್‌ 2 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು. ಈ ಮೂಲಕ ಭಾರತ 2ನೇ ಬಾರಿಗೆ ವಿಶ್ವಕಪ್ ಗೆದ್ದು ಸಾಧನೆ ಮಾಡಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ನೆನಪುಗಳನ್ನು ಮೆಲುಕು ಹಾಕಿರುವ ಕ್ರೀಡಾಭಿಮಾನಿಗಳು ಧೋನಿ ಹಾಗೂ ಗಂಭೀರ್ ಜೋಡಿಯ ಆಟವನ್ನು ಸ್ಮರಿಸಿದ್ದಾರೆ.

ಈ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದಿದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದಂತೆ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿತ್ತು.

ಈ ಗುರಿ ಬೆನ್ನತ್ತಿದ್ದ ಭಾರತ 48.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತ್ತು. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಗೌತಮ್ ಗಂಭೀರ್ 97, ಎಂ.ಎಸ್‌.ಧೋನಿ ಔಟಾಗದೆ 91 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು.

1983ರಲ್ಲಿ ಭಾರತ ಮೊದಲ ಬಾರಿಗೆ ವಿಶ್ವಕಪ್‌ ಗೆದ್ದು ಸಾಧನೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT