ನವದೆಹಲಿ: ಅಬುಧಾಬಿಯಲ್ಲಿ ಸೆ.19ರಂದು ನಡೆದ ಐಪಿಎಲ್ ಟೂ ರ್ನಿಯ ಉದ್ಘಾಟನೆ ಪಂದ್ಯವನ್ನು ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳ ಮೂ ಲಕ 20 ಕೋಟಿ ಮಂದಿ ವೀಕ್ಷಿಸಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆದಿತ್ತು. ಅದರಲ್ಲಿ ಚೆನ್ನೈ ಜಯಭೇರಿ ಬಾರಿಸಿತ್ತು. ಈ ಬಾರಿಯ ಪಂದ್ಯಗಳನ್ನು ಪ್ರೇಕ್ಷಕರಿಲ್ಲದ ಖಾಲಿ ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶಾ,‘ಡ್ರೀಮ್ ಇಲೆವನ್ ಐಪಿಎಲ್ ಹೊಸ ದಾಖಲೆ ನಿರ್ಮಿಸಿದೆ! ಬಾರ್ಕ್ ಮಾಹಿತಿ ಪ್ರಕಾರ, ಅಭೂತಪೂರ್ವ 20 ಕೋಟಿ ಜನರು ಪಂದ್ಯವನ್ನು ವೀಕ್ಷಿಸಿದ್ದಾರೆ. ಯಾವುದೇ ದೇಶದಲ್ಲಿ ನಡೆಯುವ ಕ್ರೀಡಾಕೂಟದ ಮೊದಲ ದಿನದ ಗರಿಷ್ಠ ಸಂಖ್ಯೆಯ ವೀಕ್ಷಣೆ ಇದಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.