ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ20 ಕ್ರಿಕೆಟ್‌: ಏಷ್ಯಾಕಪ್‌ ಟೂರ್ನಿ 2023ಕ್ಕೆ ಮುಂದೂಡಿಕೆ

Last Updated 23 ಮೇ 2021, 14:36 IST
ಅಕ್ಷರ ಗಾತ್ರ

ದುಬೈ: ಕೋವಿಡ್‌–19 ಸೃಷ್ಟಿಸಿರುವ ಬಿಕ್ಕಟ್ಟಿನ ಕಾರಣ ವೇಳಾಪಟ್ಟಿಯನ್ನು ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ವರ್ಷದ ಏಷ್ಯಾಕಪ್ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯನ್ನು 2023ಕ್ಕೆ ಮುಂದೂಡಲಾಗಿದೆ.

2021ರ ಟೂರ್ನಿಯನ್ನು ಪಾಕಿಸ್ತಾನದಿಂದ ಶ್ರೀಲಂಕಾಕ್ಕೆ ಸ್ಥಳಾಂತರ ಮಾಡಲಾಗಿತ್ತು. ಆದರೆ ದ್ವೀಪರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿರುವುದರಿಂದ ಈ ಬಾರಿಯ ಟೂರ್ನಿಯನ್ನು ರದ್ದು ಮಾಡಲು ನಿರ್ಧರಿಸಲಾಗಿತ್ತು.

ಏಷ್ಯಾದ ನಾಲ್ಕು ಪ್ರಮುಖ ರಾಷ್ಟ್ರಗಳಲ್ಲಿ ಈ ವರ್ಷಾಂತ್ಯದವರೆಗೆ ಕ್ರಿಕೆಟ್ ವೇಳಾಪಟ್ಟಿಯನ್ನು ಈಗಾಗಲೇ ನಿರ್ಧರಿಸಿರುವುದರಿಂದ ಏಷ್ಯಾಕಪ್ ಟೂರ್ನಿಗೆ ಸಮಯ ಹೊಂದಿಸುವುದು ಕಷ್ಟಕರವಾಗಿತ್ತು.

ಈ ಕುರಿತು ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಹೇಳಿಕೆ ಬಿಡುಗಡೆ ಮಾಡಿದೆ.

‘ಮಂಡಳಿಯು ಈ ವಿಷಯವನ್ನು ಬಹಳ ಸೂಕ್ಷ್ಮವಾಗಿ ಪರಿಗಣಿಸಿದ್ದು, ಟೂರ್ನಿಯನ್ನು ಮುಂದೂಡುವುದೇ ಕೊನೆಯ ಮಾರ್ಗವಾಗಿದೆ. ಈ ಆವೃತ್ತಿಯ ಟೂರ್ನಿಯನ್ನು 2023ಕ್ಕೆ ನಡೆಸಲಾಗುವುದು. ಏಕೆಂದರೆ 2022ಕ್ಕೂ ಒಂದು ಏಷ್ಯಾಕಪ್ ಟೂರ್ನಿ ನಿಗದಿಯಾಗಿದೆ. 2023ರ ಟೂರ್ನಿ ನಡೆಯುವ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು‘ ಎಂದು ಎಸಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT