ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಭಾರತ, ಸೂರ್ಯಕುಮಾರ್ ಯಾದವ್ ಅಬ್ಬರದ ಅರ್ಧಶತಕದ(61) ನೆರವಿನಿಂದ 238 ರನ್‌ಗಳ ಕಠಿಣ ಸವಾಲೊಡ್ಡಿದೆ.

ಅಸ್ಸಾಂ ರಾಜಧಾನಿ ಬರ್ಸಾಪುರದಲ್ಲಿರುವ ಡಾ.ಭೂಪೆನ್ ಹಜಾರಿಕಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3 ಪಂದ್ಯಗಳ ಸರಣಿಯ 2ನೇ ಪಂದ್ಯದಲ್ಲಿ 20 ಓವರ್‌ಗಳಲ್ಲಿ ಭಾರತ ಕೇವಲ 3 ವಿಕೆಟ್ ನಷ್ಟಕ್ಕೆ 237 ರನ್‌ಗಳ ಬೃಹತ್ ಮೊತ್ತ ದಾಖಲಿಸಿದೆ.

ಆರಂಭಿಕರಾಗಿ ಮೈದಾನಕ್ಕಿಳಿದ ನಾಯಕ ರೋಹಿತ್ ಶರ್ಮಾ ಹಾಗೂ ಕೆ.ಎಲ್.ರಾಹುಲ್ 96 ರನ್‌ಗಳ ಜೊತೆಯಾಟದೊಂದಿಗೆ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. 1 ಸಿಕ್ಸ್ ಹಾಗೂ 7 ಬೌಂಡರಿಗಳೊಂದಿಗೆ 37 ಎಸೆತಗಳಲ್ಲಿ 43 ರನ್ ಗಳಿಸಿದ ರೋಹಿತ್ ಶರ್ಮಾ 9.5ನೇ ಓವರ್‌ನಲ್ಲಿ ಸ್ಟಬಸ್‌ಗೆ ಕ್ಯಾಚ್ ಇತ್ತು ನಿರ್ಗಮಿಸಿದರು. ಆಕರ್ಷಕ ಅರ್ಧಶತಕದೊಂದಿಗೆ ಬಿರುಸಿನ ಆಟವಾಡುತ್ತಿದ್ದ ಕೆ.ಎಲ್.ರಾಹುಲ್ 28 ಎಸೆತಗಳಲ್ಲಿ 57 ರನ್‌ಗಳಿಸಿ ಮಹರಾಜಗೆ ವಿಕೆಟ್ ಒಪ್ಪಿಸಿದರು.

ನಂತರ ವಿರಾಟ್ ಕೊಹ್ಲಿಗೆ ಜೊತೆಯಾದ ಸೂರ್ಯಕುಮಾರ್ ಯಾದವ್ 22 ಎಸೆತಗಳಲ್ಲಿ 61 ರನ್ ಗಳಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. 5 ಬೌಂಡರಿ, 5 ಸಿಕ್ಸ್ ಸಿಡಿಸಿದ ಯಾದವ್, 18ನೇ ಓವರ್‌ನಲ್ಲಿ ರನ್ ಔಟ್ ಆದರು. ವಿರಾಟ್ ಕೊಹ್ಲಿ ಅಜೇಯ 49 ಹಾಗೂ ದಿನೇಶ್ ಕಾರ್ತಿಕ್ ಅಜೇಯ 17 ರನ್‌ಗಳ ಕಾಣಿಕೆಯೊಂದಿಗೆ ದ.ಆಫ್ರಿಕಾಕ್ಕೆ 238 ರನ್‌ಗಳ ಕಠಿಣ ಗುರಿ ನೀಡುವಲ್ಲಿ ಭಾರತ ಯಶಸ್ವಿಯಾಗಿದೆ. ದ.ಆಫ್ರಿಕಾ ಪರ ಕೇಶವ್ ಮಹರಾಜ್ 23 ರನ್‌ಗಳಿಗೆ 2 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು.

ಆರ್ಶದೀಪ್ ಸಿಂಗ್ ಮಾರಕ ದಾಳಿಗೆ ತತ್ತರಿಸುವ ದ.ಆಫ್ರಿಕಾ 5ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಪಂದ್ಯ ಗೆಲ್ಲುವ ಮೂಲಕ ಸರಣಿ ಕೈವಶವಾಗಿಸಿಕೊಳ್ಳುವ ತವಕದಲ್ಲಿ ಭಾರತ ತಂಡವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.