ಶುಕ್ರವಾರ, ಜನವರಿ 22, 2021
20 °C

ಇಂಡಿಯಾ– ಆಸೀಸ್ ಕ್ರಿಕೆಟ್‌ ಪಂದ್ಯದ ವೇಳೆ ಪ್ರೇಮ ನಿವೇದನೆ: ವಿಡಿಯೊ ವೈರಲ್‌

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ (ಎಸ್‌ಸಿಜಿ) ಆಸ್ಟ್ರೇಲಿಯಾ ಮೂಲದ ಯುವತಿಗೆ ಭಾರತೀಯ ಮೂಲದ ಯುವಕ ಪ್ರೇಮ ನಿವೇದನೆ ಮಾಡಿದ್ದು, ಇದೀಗ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಹೌದು, ಭಾರತ– ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ಈ ಘಟನೆ ನಡೆದಿದೆ.

ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತ್ತಿದ್ದ ಯುವತಿ ಬಳಿ ತೆರಳಿದ ಯುವಕ ಉಂಗುರ ಮುಂದಿಟ್ಟು ಪ್ರೇಮ ನಿವೇದನೆ ಮಾಡಿದ್ದಾನೆ. ಇದಕ್ಕೆ ಯುವತಿ ಒಪ್ಪಿಕೊಂಡಿದ್ದಾಳೆ. ಇದೇ ವೇಳೆ ಗ್ಯಾಲರಿಯಲ್ಲಿ ಕುಳಿತ್ತಿದ್ದ ಕ್ರೀಡಾಭಿಮಾನಿಗಳು ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಈ ಪಂದ್ಯದಲ್ಲಿ ಭಾರತದ ಎದುರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟಕ್ಕೆ 389 ರನ್‌ ಗಳಿಸಿತ್ತು.

390 ರನ್‌ಗಳ ಬೃಹತ್‌ ಮೊತ್ತ ಬೆನ್ನತ್ತಿದ್ದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 338 ರನ್‌ ಗಳಿಸಿತು. ಈ ಮೂಲಕ ಆಸ್ಟ್ರೇಲಿಯಾ 51 ರನ್‌ ಗೆಲುವು ಸಾಧಿಸಿತು.

3 ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದ್ದು, ಸರಣಿ ಕೈವಶಪಡಿಸಿಕೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು