ಲಂಡನ್: ಆತಿಥೇಯ ಇಂಗ್ಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದ ನಾಲ್ಕನೇ ದಿನದಾಟ ಆರಂಭಕ್ಕೂ ಮುನ್ನಭಾರತ ತಂಡದಆಟಗಾರರು ತ್ರಿವರ್ಣ ಧ್ವಜ ಹಾರಿಸಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸಿದರು. ಇಂದು ಭಾರತ ಸ್ವಾತಂತ್ರ್ಯದ75ನೇ ವರ್ಷಾಚರಣೆಯ ದಿನವಾಗಿದೆ.
ವಿರಾಟ್ ಕೊಹ್ಲಿ ಪಡೆಯ ವಿಡಿಯೊವೊಂದನ್ನುಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಬಿಸಿಸಿಐ, ಈ ಮಾಹಿತಿ ನೀಡಿದೆ. ʼಭಾರತದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಧ್ವಜಾರೋಹಣ ಮಾಡಲುಟೀಂ ಇಂಡಿಯಾ ಸದಸ್ಯರು ಒಂದೆಡೆ ಸೇರಿದರುʼ ಎಂದು ಟ್ವೀಟ್ ಮಾಡಿದೆ.
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಪಂದ್ಯದನಾಲ್ಕನೇ ದಿನದಾಟ ಆರಂಭವಾಗಿದ್ದು, ಭಾರತ ತಂಡ ಎರಡನೇ ಇನಿಂಗ್ಸ್‌ನಲ್ಲಿ ಊಟದ ವಿರಾಮದ ಹೊತ್ತಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡು56 ರನ್ ಗಳಿಸಿದೆ. ಆರಂಭಿಕ ರೋಹಿತ್ ಶರ್ಮಾ (21), ಮೊದಲ ಇನಿಂಗ್ಸ್‌ನಲ್ಲಿ ಶತಕ ಗಳಿಸಿದ್ದ ಕೆ.ಎಲ್. ರಾಹುಲ್ (5) ಮತ್ತು ನಾಯಕ ವಿರಾಟ್ ಕೊಹ್ಲಿ (20) ಔಟಾಗಿದ್ದಾರೆ. ಫಾರ್ಮ್ ಕಂಡುಕೊಳ್ಳಲು ಪರದಾಡುತ್ತಿರುವ ಟೆಸ್ಟ್ ಪರಿಣತ ಚೇತೇಶ್ವರ ಪೂಜಾರ (3) ಮತ್ತು ಉಪನಾಯಕ ಅಜಿಂಕ್ಯ ರಹಾನೆ (1) ಕ್ರೀಸ್‌ನಲ್ಲಿದ್ದಾರೆ.
ಭಾರತ ಮೊದಲ ಇನಿಂಗ್ಸ್‌ನಲ್ಲಿ364 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್391 ರನ್‌ಗಳಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.