ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ನಲ್ಲಿ ಗೇಲ್ ಬಳಿಕ ಈ ವಿಶಿಷ್ಟ ಸಾಧನೆ ಮಾಡಿದ ಏಕಮಾತ್ರ ಆಟಗಾರ ವಿಲಿಯರ್ಸ್

Last Updated 7 ಅಕ್ಟೋಬರ್ 2021, 10:14 IST
ಅಕ್ಷರ ಗಾತ್ರ

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ 250 ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆಗೆ 'ಮಿಸ್ಟರ್ 360 ಡಿಗ್ರಿ' ಬ್ಯಾಟ್ಸ್‌ಮನ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಭಾಜನರಾಗಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧಬುಧವಾರನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಲಿಯರ್ಸ್ ಈ ಮೈಲಿಗಲ್ಲು ತಲುಪಿದ್ದಾರೆ.

ಈ ಮೂಲಕ ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಬಳಿಕ ಈ ಸಾಧನೆ ಮಾಡಿದ ಏಕಮಾತ್ರ ಆಟಗಾರ ಎನಿಸಿದ್ದಾರೆ. ಅಗ್ರಸ್ಥಾನದಲ್ಲಿರುವ ಗೇಲ್ ಒಟ್ಟು 357 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.

ಇನ್ನು ಮೂರು ಹಾಗೂ ನಾಲ್ಕನೇ ಸ್ಥಾನಗಳನ್ನು ಹಂಚಿರುವ ರೋಹಿತ್ ಶರ್ಮಾ ಹಾಗೂ ಮಹೇಂದ್ರ ಸಿಂಗ್ ಧೋನಿ ಕ್ರಮವಾಗಿ 227 ಹಾಗೂ 218 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಏತನ್ಮಧ್ಯೆ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ನಾಲ್ಕು ರನ್ ಅಂತರದ ಸೋಲಿಗೆ ಶರಣಾಗಿತ್ತು. ವಿಲಿಯರ್ಸ್ 19 ರನ್ ಗಳಿಸಿ ಔಟಾಗದೆ ಉಳಿದರೂ ಪಂದ್ಯ ಗೆಲ್ಲಿಸಲಾಗಲಿಲ್ಲ.

ಐಪಿಎಲ್‌ನಲ್ಲಿ ಗರಿಷ್ಠ ಸಿಕ್ಸರ್ ಸರದಾರರು:
1. ಕ್ರಿಸ್ ಗೇಲ್: 357
2. ಎಬಿ ಡಿವಿಲಿಯರ್ಸ್: 250
3. ರೋಹಿತ್ ಶರ್ಮಾ: 227
4. ಮಹೇಂದ್ರ ಸಿಂಗ್ ಧೋನಿ: 218
5. ಕೀರನ್ ಪೊಲಾರ್ಡ್: 214
6. ವಿರಾಟ್ ಕೊಹ್ಲಿ: 210
7. ಸುರೇಶ್ ರೈನಾ: 203
8. ಡೇವಿಡ್ ವಾರ್ನರ್: 201
9. ಶೇನ್ ವಾಟ್ಸನ್: 190
10. ರಾಬಿನ್ ಉತ್ತಪ್ಪ: 163

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT