ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಹ್ಲಿ ನಾಯಕತ್ವವನ್ನು ಗುಣಗಾನ ಮಾಡಿದ ವಿಲಿಯರ್ಸ್

Last Updated 7 ಮಾರ್ಚ್ 2021, 11:07 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಕಪ್ತಾನ ವಿರಾಟ್ ಕೊಹ್ಲಿ ನಾಯಕತ್ವವನ್ನು ದಕ್ಷಿಣ ಆಫ್ರಿಕಾದ ಜನಪ್ರಿಯ ಆಟಗಾರ ಎಬಿ ಡಿ ವಿಲಿಯರ್ಸ್ ವಿಶೇಷವಾಗಿ ಕೊಂಡಾಡಿದ್ದಾರೆ.

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಹ ಆಟಗಾರನಾಗಿರುವ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿ ಡಿ ವಿಲಿಯರ್ಸ್, ತಮ್ಮ ಆತ್ಮೀಯ ಗೆಳೆಯನ ನಾಯಕತ್ವದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದರು.

'ಕೊಹ್ಲಿ ನಾಯಕತ್ವದಡಿಯಲ್ಲಿ ಅಕ್ಷರ್ ಪಟೇಲ್, ರಿಷಭ್ ಪಂತ್ ಹಾಗೂ ವಾಷಿಂಗ್ಟನ್ ಸುಂದರ್ ಅವರಂತಹ ಯುವ ಆಟಗಾರರಿಗೆ ಮುಕ್ತವಾಗಿ ಆಡಲು ಸಾಧ್ಯವಾಗಿದ್ದು, ಪಂದ್ಯದ ಮೇಲೆ ಅಧಿಪತ್ಯ ಸ್ಥಾಪಿಸಲು ನೆರವಾಗಿದೆ' ಎಂದು ಎಬಿ ಡಿ ವಿಲಿಯರ್ಸ್ ಶ್ಲಾಘಿಸಿದರು.

'ವೈಯಕ್ತಿಕವಾಗಿ ಕಳಪೆ ಪ್ರದರ್ಶನ ನೀಡಿದಾಗ ತಮ್ಮ ದೇಹಭಾಷೆ ಹಾಗೂ ಉತ್ಸಾಹದ ಮೂಲಕ ಸಹ ಆಟಗಾರರನ್ನು ಹುರಿದುಂಬಿಸುತ್ತಿರುವುದು ವಿಶೇಷ ನಾಯಕನ ಗುಣ ಲಕ್ಷಣವಾಗಿದೆ' ಎಂದು ಎಬಿ ಡಿ ವಿಲಿಯರ್ಸ್ ಉಲ್ಲೇಖಿಸಿದರು.

ಇಂಗ್ಲೆಂಡ್ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 25 ರನ್ ಅಂತರದ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 3-1ರ ಅಂತರದಲ್ಲಿ ವಶಪಡಿಸಿಕೊಂಡಿತ್ತು.

ಈ ಮೂಲಕ ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಟೀಮ್ ಇಂಡಿಯಾ, ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಇನ್ನೂಂದೆಡೆ ಸರಣಿಯಲ್ಲಿ ಎರಡು ಬಾರಿ ಶೂನ್ಯಕ್ಕೆ ಔಟ್ ಆಗಿರುವ ವಿರಾಟ್ ಕೊಹ್ಲಿ, ವೈಯಕ್ತಿಕವಾಗಿ ಕಳಪೆ ಪ್ರದರ್ಶನ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT