ಬೆಂಗಳೂರು: ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಮತ್ತು ಡೇನಿಯಲ್ ದಂಪತಿಯು ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಈ ವಿಷಯವನ್ನು ಡೇನಿಯಲ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿದ್ದಾರೆ. ಎಬಿಡಿ ಆಡುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಪತ್ನಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಡೇನಿಯಲ್ ಅವರಿಗೆ ಶುಭ ಹಾರೈಸಿದ್ದಾರೆ.

’ಇಬ್ಬರು ಪುತ್ರರಿದ್ದಾರೆ. ಆದ್ದರಿಂದ ಈ ಬಾರಿ ಹೆಣ್ನುಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದೇವೆ‘ ಎಂದು ಡೇನಿಯಲ್ ಬರೆದಿದ್ದಾರೆ.

’ಒಳ್ಳೆಯ ಸುದ್ದಿ ತಿಳಿಸಿದ್ದೀರಿ. ಡೇನಿಯಲ್ ಮತ್ತು ಎಬಿ ಶುಭವಾಗಲಿ ನಿಮಗೆ‘ ಎಂದು ಅನುಷ್ಕಾ ಪ್ರತಿಕ್ರಿಯಿಸಿದ್ದಾರೆ.

ದಕ್ಷಿಣ ಆಫ್ರಿಕಾ ತಂಡದ ನಾಯಕರಾಗಿದ್ದ ಎಬಿಡಿ ತಮ್ಮ ವಿಶಿಷ್ಟ ಶೈಲಿಯ ಸ್ಪೋಟಕ ಬ್ಯಾಟಿಂಗ್‌ನಿಂದ ಗಮನ ಸೆಳೆದವರು. ಆರ್‌ಸಿಬಿಯಲ್ಲಿ ಹಲವು ವರ್ಷಗಳಿಂದ ಆಡುತ್ತಿದ್ದಾರೆ. ಬೆಂಗಳೂರಿನಲ್ಲಿ ಅವರ ಅಭಿಮಾನಿಗಳ ದೊಡ್ಡ ಬಳಗವಿದೆ.

ಈ ಬಾರಿಯೂ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡಲು ಬರುವವರಿದ್ದರು. ಆದರೆ, ಮಾರ್ಚ್‌ನಲ್ಲಿ ನಡೆಯಬೇಕಿದ್ದ ಟೂರ್ನಿಯನ್ನು ಕೋವಿಡ್ –19 ಕಾರಣದಿಂದ ಮುಂದೂಡಲಾಗಿದೆ.

ಸುಮಾರು ಒಂದೂವರೆ ವರ್ಷದ ಹಿಂದೆ ಎಬಿಡಿ ಅಂತರರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.