ಭಾನುವಾರ, ನವೆಂಬರ್ 28, 2021
19 °C

ಭಾರತ ಕ್ರಿಕೆಟ್ ತಂಡದ ಫೀಲ್ಡಿಂಗ್ ಕೋಚ್ ಸ್ಥಾನಕ್ಕೆ ಅಭಯ್ ಶರ್ಮಾ ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಭಾರತ ಕ್ರಿಕೆಟ್ ತಂಡದ ಫೀಲ್ಡಿಂಗ್ ಕೋಚ್ ಸ್ಥಾನಕ್ಕಾಗಿ ಕ್ರಿಕೆಟಿಗ ಅಭಯ್ ಶರ್ಮಾ ಅರ್ಜಿ ಸಲ್ಲಿಸಿದ್ದಾರೆ.

ಸದ್ಯ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರ ಅವಧಿಯು ಮುಕ್ತಾಯವಾಗಿದೆ. ಅವರ ಸ್ಥಾನಕ್ಕೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನವಾಗಿದೆ.

52 ವರ್ಷದ ಅಭಯ್ ಭಾರತ ಎ ಮತ್ತು 19 ವರ್ಷದೊಳಗಿನವರ ತಂಡಗಳಲ್ಲಿ ಕೋಚ್ ಆಗಿದ್ದರು. ಇತ್ತೀಚೆಗೆ ಭಾರತ ಮಹಿಳಾ ತಂಡಕ್ಕೂ ಅವರು ಮಾರ್ಗದರ್ಶನ ನೀಡಿದ್ದರು. ಶರ್ಮಾ ದೆಹಲಿ, ರೈಲ್ವೆಸ್ ಮತ್ತು ರಾಜಸ್ಥಾನ ತಂಡಗಳಲ್ಲಿ ಆಡಿದ್ದರು. 89 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ.

2016ರಲ್ಲಿ ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದ ಭಾರತ ತಂಡದ ಫೀಲ್ಡಿಂಗ್ ಕೋಚ್ ಆಗಿದ್ದರು. ಅದೇ ವರ್ಷ ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿಆಡಿದ್ ಭಾರತ ತಂಡಕ್ಕೂ ಶರ್ಮಾ ಮಾರ್ಗದರ್ಶನ ಮಾಡಿದ್ದರು.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಕೋಚ್ ಆಗಿರುವ ಶರ್ಮಾ, ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರೊಂದಿಗೆ ಕಾರ್ಯನಿರ್ವಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು