ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಟೇಲ್‌ ಗಲಾಟೆಯಲ್ಲಿ ಅಫ್ಗನ್ ಆಟಗಾರರು?

Last Updated 19 ಜೂನ್ 2019, 19:47 IST
ಅಕ್ಷರ ಗಾತ್ರ

ಮ್ಯಾಂಚೆಸ್ಟರ್: ಅಫ್ಗಾನಿಸ್ತಾನ ತಂಡದ ಕೆಲವು ಆಟಗಾರರು ಇಲ್ಲಿಯ ಹೋಟೆಲ್‌ವೊಂದರಲ್ಲಿ ಜನರೊಂದಿಗೆ ವಾಗ್ವಾದ ನಡೆಸಿದ್ದಾರೆನ್ನಲಾಗಿದೆ. ಆದರೆ ತಂಡದ ನಾಯಕ ಗುಲ್ಬದೀನ್ ನೈಬ್ ಅವರು ಈ ಘಟನೆಯನ್ನು ಅಲ್ಲಗಳೆದಿದ್ದಾರೆ.

‘ಸೋಮವಾರ ರಾತ್ರಿ ಇಲ್ಲಿಯ ಅಕ್ಬರ್ ರೆಸ್ಟೋರೆಂಟ್‌ನಲ್ಲಿ ಅಫ್ಗಾನಿಸ್ತಾನ ತಂಡದ ಕೆಲವು ಮೀಸಲು ಆಟಗಾರರು ಹೋಗಿದ್ದರು. ಅಲ್ಲಿದ್ದ ಒಬ್ಬ ಅವರನ್ನು ಮೊಬೈಲ್‌ನಲ್ಲಿ ರೆಕಾರ್ಡಿಂಗ್ ಮಾಡುತ್ತಿದ್ದ. ಅದನ್ನು ಆಟಗಾರರು ತಡೆಯಲು ಹೋದಾಗ ಮಾತಿನ ಚಕಮಕಿ ನಡೆದು ಪೊಲೀಸರು ವಾತಾವರಣ ತಿಳಿಗೊಳಿಸಿದರು. ಈ ಸಂಬಂಧ ಯಾರನ್ನೂ ಬಂಧಿಸಲಾಗಿಲ್ಲ ಎಂದು ಬಿಬಿಸಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT