ನವದೆಹಲಿ: ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ಇದೇ ಜೂನ್ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದು, ಒಂದು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ತಿಳಿಸಿದೆ.

ಜೂನ್ 6ರಂದು ಚಂಡೀಗಢದ ಮುಲ್ಲನಪುರದಲ್ಲಿ ಟೆಸ್ಟ್ ಪಂದ್ಯದೊಂದಿಗೆ ಪ್ರವಾಸ ಆರಂಭವಾಗಲಿದೆ. ಆದರೆ, ಈ ಟೆಸ್ಟ್ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್ಷಿನ್ನ ಪಾಯಿಂಟ್ಸ್ಗೆ ಸೇರುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 31ರಂದು ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಗಿದ ಕೂಡಲೇ ಅಫ್ಘಾನಿಸ್ತಾನ ತಂಡದ ಪ್ರವಾಸ ಆರಂಭವಾಗಲಿದೆ. ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ನಲ್ಲಿ ಅಫ್ಗಾನಿಸ್ತಾನ ಸೇರಿದಂತೆ ವಿವಿಧ ರಾಷ್ಟ್ರಗಳ ಕ್ರಿಕೆಟ್ ತಾರೆಯರು ಕಣಕ್ಕಿಳಿಯಲಿದ್ದಾರೆ.

ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನಲ್ಲಿ ಅಫ್ಗಾನಿಸ್ತಾನ ತಂಡವು ಗುಂಪು ಹಂತದಲ್ಲೇ ಹೊರಬಿದ್ದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.