ಶುಕ್ರವಾರ, ಜೂನ್ 5, 2020
27 °C

ಲಾಕ್‌ಡೌನ್‌: ನಿರ್ಗತಿಕರಿಗೆ ಸಹಾಯ ಹಸ್ತ ಚಾಚಿದ ಸಚಿನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮುಂಬೈ: ಭಾರತದ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಹಸಿದವರಿಗೆ ಆಹಾರ ನೀಡಲು ಮುಂದಾಗಿದ್ದಾರೆ.

ಕೋವಿಡ್‌–19ನಿಂದ ಬಳಲುತ್ತಿರುವವರಿಗೆ ಸಹಾಯ ಹಸ್ತ ಚಾಚಿದ್ದ ಸಚಿನ್‌, ಈ ಹಿಂದೆ ₹50 ಲಕ್ಷ ದೇಣಿಗೆ ನೀಡಿದ್ದರು.

ಅಪ್ನಾಲಯ ಸ್ವಯಂ ಸೇವಾ ಸಂಸ್ಥೆ ಜೊತೆ ಕೈಜೋಡಿಸಿರುವ ಸಚಿನ್‌, 5000 ಮಂದಿಗೆ ಒಂದು ತಿಂಗಳು ದಿನಸಿ ಒದಗಿಸಲು ತೀರ್ಮಾನಿಸಿದ್ದಾರೆ.

‘ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ನಾವು ಆಹಾರ ಪೂರೈಸುತ್ತಿದ್ದೇವೆ. ನಮ್ಮ ಈ ಕಾರ್ಯಕ್ಕೆ ಸಚಿನ್‌ ತೆಂಡೂಲ್ಕರ್‌ ಕೈಜೋಡಿಸಿದ್ದಾರೆ. ಅವರಿಗೆ ಕೃತಜ್ಞತೆಗಳು’ ಎಂದು ಶುಕ್ರವಾರ ಅಪ್ನಾಲಯ ಸಂಸ್ಥೆ ಟ್ವೀಟ್‌ ಮಾಡಿದೆ.

‘ನಿರ್ಗತಿಕರ ನೋವಿಗೆ ಮಿಡಿದಿರುವ ಅಪ್ನಾಲಯ ಸಂಸ್ಥೆಗೆ ಶುಭವಾಗಲಿ. ನೀವು ಉತ್ತಮ ಕೆಲಸ ಮಾಡುತ್ತಿದ್ದೀರಿ. ಇದನ್ನು ಹೀಗೆ ಮುಂದುವರಿಸಿ’ ಎಂದು ಸಚಿನ್‌ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು