ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WPL: ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್- ಟಾಟಾ ಸಮೂಹಕ್ಕೆ ಟೈಟಲ್ ಪ್ರಾಯೋಜಕತ್ವ

Last Updated 21 ಫೆಬ್ರುವರಿ 2023, 15:53 IST
ಅಕ್ಷರ ಗಾತ್ರ

ನವದೆಹಲಿ: ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್(ಡಬ್ಲ್ಯೂಪಿಎಲ್) ಕ್ರಿಕೆಟ್ ಪಂದ್ಯಾವಳಿಯ ಟೈಟಲ್ ಪ್ರಾಯೋಜಕತ್ವದ ಹಕ್ಕನ್ನು ಟಾಟಾ ಗ್ರೂಪ್ ತನ್ನದಾಗಿಸಿಕೊಂಡಿದೆ.

ಐದು ವರ್ಷಗಳ ಅವಧಿಗೆ ಟಾಟಾ ಸಮೂಹವು ಹಕ್ಕನ್ನು ಪಡೆದುಕೊಂಡಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಕಳೆದ ವರ್ಷ ಟಾಟಾ ಸಮೂಹವು ಇಂಡಿಯನ್ ಪ್ರೀಮಿಯರ್ ಲೀಗ್ ಟೈಟಲ್ ಪ್ರಾಯೋಜಕತ್ವವವನ್ನು ಪಡೆದಿತ್ತು.

'ಐದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಲಾಗಿದೆ' ಎಂದು ಮೂಲಗಳು ತಿಳಿಸಿವೆ.

ಮಹಿಳಾ ಪ್ರೀಮಿಯರ್ ಲೀಗ್(ಡಬ್ಲ್ಯೂಪಿಎಲ್) ಮೊದಲ ಆವೃತ್ತಿಯ ಪಂದ್ಯಗಳು ಮಾರ್ಚ್ 4ರಿಂದ ಮುಂಬೈನ ಬ್ರಬೌರ್ನ್ ಕ್ರೀಡಾಂಗಣ ಮತ್ತು ಡಿ.ವೈ. ಪಾಟೀಲ್ ಕ್ರೀಡಾಂಗಣಗಳಲ್ಲಿ ನಡೆಯಲಿವೆ.

ಮಹಿಳಾ ಮಾಧ್ಯಮ ಹಕ್ಕು ಮಾರಾಟದಿಂದ ₹951 ಕೋಟಿ ಮತ್ತು 5 ತಂಡಗಳ ಮಾರಾಟದಿಂದ ₹4,700 ಕೋಟಿಯನ್ನು ಬಿಸಿಸಿಐ ಗಳಿಸಿದೆ.

ಈ ತಿಂಗಳ ಆರಂಭದಲ್ಲಿ ನಡೆದ ಆಟಗಾರ್ತಿಯರ ಹರಾಜಿನಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅತ್ಯಧಿಕ ₹3.40 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT