ಮಂಗಳವಾರ, ಮೇ 11, 2021
27 °C

ಸಚಿನ್ ಬೆನ್ನಲ್ಲೇ ಯೂಸುಫ್ ಪಠಾಣ್‌ಗೆ ಕೋವಿಡ್ ಪಾಸಿಟಿವ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯೂಸುಫ್ ಪಠಾಣ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ಮಾಜಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಬೆನ್ನಲ್ಲೇ ಯೂಸುಫ್ ಪಠಾಣ್ ಅವರಲ್ಲೂ ಕೋವಿಡ್ ಸೋಂಕು ಪತ್ತೆಯಾಗಿದೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವರ್ಲ್ಡ್ ರೋಡ್ ಸೇಫ್ಟಿ ಕ್ರಿಕೆಟ್ ಟೂರ್ನಿಯಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವನ್ನು ಇವರಿಬ್ಬರು ಜೊತೆಯಾಗಿ ಪ್ರತಿನಿಧಿಸಿದ್ದರು.

ಇದನ್ನೂ ಓದಿ: 

ಹಾಗಾಗಿ ಟೂರ್ನಿಯಲ್ಲಿ ಭಾಗವಹಿಸಿದ ಮತ್ತಷ್ಟು ಆಟಗಾರರಿಗೆ ಕೊರೊನಾ ಸೋಂಕು ತಗುಲಿರಬಹುದೇ ಎಂಬುದು ಆತಂಕಕ್ಕೆ ಕಾರಣವಾಗಿದೆ.

 

 

 

38 ವರ್ಷದ ಯೂಸುಫ್ ಈ ಕುರಿತು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, 'ಸೌಮ್ಯ ಸ್ವರೂಪದ ರೋಗಲಕ್ಷಣಗಳೊಂದಿಗೆ ನನಗೆ ಇಂದು (ಶನಿವಾರ) ಕೋವಿಡ್-19 ಸೋಂಕು ತಗುಲಿರುವುದು ದೃಢಗೊಂಡಿದೆ. ನಾನೀಗ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಹಾಗೂ ಔಷಧಿಗಳನ್ನು ತೆಗೆದುಕೊಂಡಿದ್ದೇನೆ. ಇದೇ ವೇಳೆಯಲ್ಲಿ ಇತ್ತೀಚಿಗೆ ನನ್ನ ಜೊತೆ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗನೇ ಕೋವಿಡ್ ಪರೀಕ್ಷೆಗೊಳಗಾಗಲು ವಿನಂತಿಸುವುದಾಗಿ' ತಿಳಿಸಿದ್ದಾರೆ.

ಇದನ್ನೂ ಓದಿ: 

 

ರಾಯ್‌ಪುರದಲ್ಲಿ ಕಳೆದ ಭಾನುವಾರ ಅಂತ್ಯಗೊಂಡ ಚೊಚ್ಚಲ ವರ್ಲ್ಡ್ ರೋಡ್ ಸೇಫ್ಟಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಲೆಜೆಂಡ್ಸ್ ತಂಡವನ್ನು ಮಣಿಸಿದ್ದ ಸಚಿನ್ ತೆಂಡೂಲ್ಕರ್ ನೇತೃತ್ವದ ಇಂಡಿಯಾ ಲೆಜೆಂಡ್ಸ್ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು