ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರ ಆಯ್ಕೆ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರು, ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ನ ಸಹಾಯಕ ಕೋಚ್ ಹುದ್ಗಗೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಶೇನ್ ವ್ಯಾಟ್ಸನ್ ಹಾಗೂ ಅಗರ್ಕರ್ ಇನ್ನು ಮುಂದೆ ನಮ್ಮ ಸಹಾಯಕ ಸಿಬ್ಬಂದಿಯಾಗಿ ಮುಂದುವರಿಯುವುದಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ಖಚಿತಪಡಿಸಿದೆ.

‘ನಮ್ಮ ತಂಡಕ್ಕೆ ನೀವು ನೀಡಿರುವ ಕೊಡುಗೆಗಳಿಗೆ ಧನ್ಯವಾದಗಳು. ಅಜಿತ್ ಮತ್ತು ವ್ಯಾಟ್ಟೊ, ನಿಮ್ಮ ಭವಿಷ್ಯದ ಪ್ರಯತ್ನಗಳಿಗೆ ಶುಭಾಶಯಗಳು’ ಎಂದು ಫ್ರಾಂಚೈಸಿಯು ಟ್ವೀಟ್ ಮಾಡಿ ಶುಭ ಹಾರೈಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.