ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಂಬಾಬ್ವೆ ಸರಣಿ: ಸಾಯಿ ಸುದರ್ಶನ್, ಜಿತೇಶ್ ಶರ್ಮಾ, ಹರ್ಷಿತ್ ರಾಣಾ ಅಯ್ಕೆ

Published 2 ಜುಲೈ 2024, 14:46 IST
Last Updated 2 ಜುಲೈ 2024, 14:46 IST
ಅಕ್ಷರ ಗಾತ್ರ

ಹರಾರೆ: ಟಿ20 ಕ್ರಿಕೆಟ್ ವಿಶ್ವ ಚಾಂಪಿಯನ್ ಭಾರತ ತಂಡವು ಜಿಂಬಾಬ್ವೆ ವಿರುದ್ಧದ ಜುಲೈ 6ರಿಂದ ಆರಂಭವಾಗುವ ಐದು ಚುಟುಕು ಪಂದ್ಯಗಳ ಸರಣಿಗೆ ಎಡಗೈ ಬ್ಯಾಟ್ಸ್‌ಮನ್‌ ಸಾಯಿ ಸುದರ್ಶನ್, ವಿಕೆಟ್ ಕೀಪರ್ ಮತ್ತು ಬ್ಯಾಟರ್ ಜಿತೇಶ್ ಶರ್ಮಾ ಹಾಗೂ ಬೌಲರ್‌ ಹರ್ಷಿತ್ ರಾಣಾ ಆಯ್ಕೆಯಾಗಿದ್ದಾರೆ

ಕೆರಿಬಿಯನ್‌ ದ್ವೀಪಕ್ಕೆ ಚಂಡಮಾರುತ ಅಪ್ಪಳಿಸಿದ್ದು, ಟಿ 20ನ ವಿಶ್ವಕಪ್‌ಗೆ ತೆರಳಿದ್ದ ಟೀಮ್‌ ಇಂಡಿಯಾ ತಂಡ ಬಾರ್ಬಡೋಸ್‌ ನಗರದಲ್ಲಿ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮೊದಲ ಎರಡು ಪಂದ್ಯಗಳಿಗೆ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್, ಶಿವಂ ದುಬೆ ಹಾಗೂ ಯಶಸ್ವಿ ಜೈಸ್ವಾಲ್ ಬದಲಿಗೆ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಉಳಿದ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್, ಶಿವಂ ದುಬೆ ಹಾಗೂ ಯಶಸ್ವಿ ಜೈಸ್ವಾಲ್ ಆಡಲಿದ್ದಾರೆ. ಜುಲೈ 6ರಿಂದ 14ರವರೆಗೂ 5 ಟಿ20 ಪಂದ್ಯಗಳು ನಡೆಯಲಿವೆ. 

ಅನುಭವಿ ಬ್ಯಾಟರ್ ಸಿಕಂದರ್ ರಝಾ ಅವರನ್ನು ಜಿಂಬಾಬ್ವೆ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ, ಭಾರತಕ್ಕೆ ಶುಭ್​ಮನ್ ಗಿಲ್ ನಾಯಕರಾಗಿದ್ದಾರೆ. 

ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ , ಹರ್ಷಿತ್ ರಾಣಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT