ಶನಿವಾರ, ಫೆಬ್ರವರಿ 27, 2021
23 °C
ಪ್ರಥಮ ದರ್ಜೆ ಕ್ರಿಕೆಟ್‌ನ ಪದಾರ್ಪಣೆ ಪಂದ್ಯದಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರ

ಪ್ರಥಮ ದರ್ಜೆ ಕ್ರಿಕೆಟ್‌: ವಿಶ್ವ ದಾಖಲೆ ನಿರ್ಮಿಸಿದ ಅಜಯ್‌

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ಇಂದೋರ್‌: ಮಧ್ಯಪ್ರದೇಶ ಕ್ರಿಕೆಟ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಅಜಯ್‌ ರೊಹೇರಾ ಶನಿವಾರ ಹೋಳ್ಕರ್‌ ಕ್ರೀಡಾಂಗಣದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದರು.

ಹೈದರಾಬಾದ್‌ ಎದುರಿನ ರಣಜಿ ಟ್ರೋಫಿ ಎಲಿಟ್‌ ‘ಬಿ’ ಗುಂಪಿನ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಅಜೇಯ 267ರನ್‌ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದರು.

ಪ್ರಥಮ ದರ್ಜೆ ಕ್ರಿಕೆಟ್‌ನ ಪದಾ ರ್ಪಣೆ ಪಂದ್ಯ ದಲ್ಲಿ ಅತಿ ಹೆಚ್ಚು ರನ್‌ ಕಲೆಹಾಕಿದ ಆಟಗಾರ ಎಂಬ ಹಿರಿಮೆಗೆ ಅವರು ಪಾತ್ರರಾದರು.

21 ವರ್ಷ ವಯಸ್ಸಿನ ಅಜ ಯ್‌, ಮುಂಬೈನ ಅಮೋಲ್‌ ಮಜುಂದಾರ್‌ ಹೆಸರಿನಲ್ಲಿದ್ದ ದಾಖಲೆ ಅಳಿಸಿ ಹಾಕಿದರು.

1994ರಲ್ಲಿ ಫರಿದಾಬಾದ್‌ನಲ್ಲಿ ನಡೆ ದಿದ್ದ ಹರಿಯಾಣ ಎದುರಿನ ಪಂದ್ಯದಲ್ಲಿ ಅಮೋಲ್‌ 260ರನ್‌ ಗಳಿಸಿದ್ದು ಇದು ವರೆಗಿನ ಶ್ರೇಷ್ಠ ಸಾಧನೆಯಾಗಿತ್ತು.

ಅಜಯ್‌, ಪ್ರಥಮ ದರ್ಜೆ ಕ್ರಿಕೆಟ್‌ ನಲ್ಲಿ ಮಧ್ಯಪ್ರದೇಶದ ಪರ ವೈಯಕ್ತಿಕ ಗರಿಷ್ಠ ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎಂಬ ಶ್ರೇಯಕ್ಕೂ ಪಾತ್ರರಾದರು. ಅವರು ಜೆ.ಪಿ.ಯಾದವ್‌ (265ರನ್‌) ಹೆಸರಿನಲ್ಲಿದ್ದ ದಾಖಲೆ ಮೀರಿ ನಿಂತರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು