ಆಲ್ಬಿ ಮಾರ್ಕೆಲ್ ಕ್ರಿಕೆಟ್‌ಗೆ ನಿವೃತ್ತಿ

7

ಆಲ್ಬಿ ಮಾರ್ಕೆಲ್ ಕ್ರಿಕೆಟ್‌ಗೆ ನಿವೃತ್ತಿ

Published:
Updated:
Prajavani

ಕೇಪ್‌ಟೌನ್‌: ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಆಲ್ಬಿ ಮಾರ್ಕೆಲ್‌ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತರಾಗಲು ನಿರ್ಧರಿಸಿದ್ದಾರೆ.

ವೇಗಿ ಮಾರ್ನೆ ಮಾರ್ಕೆಲ್ ಅವರ ಅಣ್ಣನಾದ ಆಲ್ಬಿಗೆ ಈಗ 37 ವರ್ಷ. ಏಕೈಕ ಟೆಸ್ಟ್‌, 58 ಏಕದಿನ ಮತ್ತು 50 ಟ್ವೆಂಟಿ–20 ಪಂದ್ಯಗಳನ್ನು ಆಡಿದ್ದಾರೆ.

ರಾಷ್ಟ್ರೀಯ ತಂಡದಲ್ಲಿ 11 ವರ್ಷ ಆಡಿದ್ದ ಅವರು ಅಂತಿಮ ಓವರ್‌ಗಳಲ್ಲಿ ಎದುರಾಳಿಗಳನ್ನು ಕಂಗೆಡಿಸಬಲ್ಲ ಬೌಲರ್ ಮತ್ತು ಬ್ಯಾಟಿಂಗ್‌ನಲ್ಲಿ ಉತ್ತಮ ಫಿನಿಷರ್ ಎಂಬ ಹೆಸರು ಗಳಿಸಿದ್ದರು.

ಐಪಿಎಲ್‌ನ ಮೊದಲ ಆವೃತ್ತಿಯಲ್ಲಿ ಹೆಚ್ಚು ಮೊತ್ತ ಗಳಿಸಿದ ಪ್ರಮುಖರ ಪೈಕಿ ಒಬ್ಬರಾಗಿದ್ದ ಅವರು ಚೆನ್ನೈ ಸೂಪರ್ ಕಿಂಗ್ಸ್‌ ತಂಡದಲ್ಲಿ ಆಡಿದ್ದರು. ನಂತರ ಡೆಲ್ಲಿ ಡೇರ್ ಡೆವಿಲ್ಸ್‌, ರೈಸಿಂಗ್‌ ಪುಣೆ ಸೂಪರ್ ಜೈಟ್ಸ್‌ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳಲ್ಲಿ ಆಡಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 3

  Sad
 • 0

  Frustrated
 • 0

  Angry

Comments:

0 comments

Write the first review for this !