ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಊಟ ನೀಡಲು ಮುಂದಾದ ದಾರ್‌

Last Updated 28 ಮಾರ್ಚ್ 2020, 0:31 IST
ಅಕ್ಷರ ಗಾತ್ರ

ಲಾಹೋರ್‌ (ಎಎಫ್‌ಪಿ): ಕೋವಿಡ್‌–19ನಿಂದಾಗಿ ಉದ್ಯೋಗ ಕಳೆದುಕೊಂಡಿರುವವರಿಗೆ ತಮ್ಮ ಒಡೆತನದ ರೆಸ್ಟೋರೆಂಟ್‌ನಲ್ಲಿ ಉಚಿತ ಊಟ ನೀಡಲು ಪಾಕಿಸ್ತಾನದ ಅಂಪೈರ್‌ ಅಲೀಂ ದಾರ್‌ ಮುಂದಾಗಿದ್ದಾರೆ. ಅವರ ಈ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ಉಪಟಳವನ್ನು ಹತ್ತಿಕ್ಕುವ ಉದ್ದೇಶದಿಂದ ಪಾಕಿಸ್ತಾನ ಸರ್ಕಾರ ಲಾಕ್‌ಡೌನ್‌ ಆದೇಶ ಹೊರಡಿಸಿದೆ. ಇದರಿಂದ ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ.

‘ಲಾಹೋರ್‌ನ ಪಿಯಾ ರಸ್ತೆಯಲ್ಲಿ ನನ್ನ ಮಾಲೀಕತ್ವದ ‘ದಾರ್ಸ್‌ ಡಿಲೈಟ್‌’ ಹೋಟೆಲ್‌ ಇದೆ. ಲಾಕ್‌ಡೌನ್‌ನಿಂದ ಉದ್ಯೋಗ ಕಳೆದುಕೊಂಡಿರುವ ಎಲ್ಲರೂ ಹೋಟೆಲ್‌ನಲ್ಲಿ ಉಚಿತವಾಗಿ ಊಟ ಮಾಡಬಹುದು’ ಎಂದು ಐಸಿಸಿ ಎಲೀಟ್‌ ಪ್ಯಾನೆಲ್‌ನ ಅಂಪೈರ್‌ ಆಗಿರುವ ದಾರ್‌ ಹೇಳಿದ್ದಾರೆ. ಈ ಕುರಿತ ವಿಡಿಯೊವನ್ನು ಅವರು ಟ್ವಿಟರ್‌ನಲ್ಲಿ ಹಾಕಿದ್ದಾರೆ.

‘ಕೊರೊನಾದಿಂದ ಇಡೀ ಜಗತ್ತೇ ಸ್ತಬ್ಧಗೊಂಡಿದೆ. ಪಾಕಿಸ್ತಾನದಲ್ಲೂ ಈ ವೈರಾಣುವಿನ ಉಪಟಳ ಹೆಚ್ಚಿದೆ. ಕೇಂದ್ರ ಸರ್ಕಾರ ಸೂಚಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಎಲ್ಲರೂ ಪಾಲಿಸಿ ಸುರಕ್ಷಿತವಾಗಿರಿ’ ಎಂದು ಅವರು ಸಲಹೆ ನೀಡಿದ್ದಾರೆ.

51 ವರ್ಷ ವಯಸ್ಸಿನ ದಾರ್‌, ಸುಮಾರು 400 ಅಂತರರಾಷ್ಟ್ರೀಯ ಪಂದ್ಯಗಳಿಗೆ ತೀರ್ಪುಗಾರರಾಗಿ ಕೆಲಸ ಮಾಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ತಂಡದ ಹಿರಿಯ ಆಟಗಾರ ಶಾಹೀದ್‌ ಅಫ್ರಿದಿ ಅವರೂ ಕೋವಿಡ್‌ ಪೀಡಿತರಿಗೆ ಸಹಾಯ ಹಸ್ತ ಚಾಚಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT