ಕೊಲೊಂಬೊ: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಧನುಷ್ಕ ಗುಣತಿಲಕ ಅವರ ಮೇಲೆ ಹೇರಿದ್ದ ನಿಷೇಧವನ್ನು ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಹಿಂಪಡೆದಿದೆ.

ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿವೇಳೆ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಗುಣತಿಲಕ ವಿರುದ್ಧ ಕೇಳಿ ಬಂದಿತ್ತು. ತಕ್ಷಣವೇ ಅವರನ್ನು ಎಲ್ಲ ಮಾದರಿಯ ಕ್ರಿಕೆಟ್‌ನಿಂದ ಲಂಕಾ ಕ್ರಿಕೆಟ್ ಮಂಡಳಿ ಹೊರಹಾಕಿತ್ತು.

ಗುಣತಿಲಕ ಅವರು ತಮ್ಮ ವಿರುದ್ಧದ ಪ್ರಕರಣದಿಂದ ಕಳೆದ ತಿಂಗಳು ಆರೋಪ ಮುಕ್ತರಾಗಿದ್ದಾರೆ.

ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿರುವ ಎಸ್‌ಎಲ್‌ಸಿ, ಗುಣತಿಲಕ ಅವರ ಮೇಲಿನ ನಿಷೇಧ ತೆರವುಗೊಳಿಸುವಂತೆ ಸ್ವತಂತ್ರ ಸಮಿತಿಯು ಶಿಫಾರಸು ಮಾಡಿತ್ತು. ಇದನ್ನು ಅಕ್ಟೋಬರ್ 13ರಂದು ನಡೆದ ಮಂಡಳಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅನುಮೋದಿಸಲಾಗಿದೆ ಎಂದು ತಿಳಿಸಿದೆ.
.ಲೈಂಗಿಕ ದೌರ್ಜನ್ಯ ಪ್ರಕರಣ: ಧನುಷ್ಕಾ ವಿರುದ್ಧ ಮೂರು ದೂರುಗಳು ವಜಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.