ಸೋಮವಾರ, ಮೇ 23, 2022
30 °C

ಐಪಿಎಲ್ ಪ್ರಸಾರ ಹಕ್ಕುಗಳಿಗಾಗಿ ಅಮೆಜಾನ್, ರಿಲಯನ್ಸ್, ಸೋನಿ ಪೈಪೋಟಿ: ವರದಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಮುಂದಿನ ಆವೃತ್ತಿಯ ಪ್ರಸಾರ ಹಕ್ಕು ಖರೀದಿಗಾಗಿ ‘ಅಮೆಜಾನ್ ಡಾಟ್ ಕಾಂ’, ‘ದಿ ವಾಲ್ಟ್ ಡಿಸ್ನಿ ಕೊ’ ಹಾಗೂ ಕೋಟ್ಯಧಿ‍ಪತಿ ಮುಕೇಶ್ ಅಂಬಾನಿ ಒಡೆತನದ ‘ರಿಲಯನ್ಸ್ ಇಂಡಸ್ಟ್ರೀಸ್’ ಮಧ್ಯೆ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಈ ವಿಚಾರವಾಗಿ ಉನ್ನತ ಮೂಲಗಳ ಮಾಹಿತಿ ಉಲ್ಲೇಖಿಸಿ ‘ಬ್ಲೂಮ್‌ಬರ್ಗ್’ ವರದಿ ಮಾಡಿದೆ.

ಈ ಕಂಪನಿಗಳ ಹೊರತಾಗಿ ‘ಸೋನಿ ಗ್ರೂಪ್’, ‘ಝೀ ಎಂಟರ್‌ಟೇನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್’, ‘ಡ್ರೀಮ್11’ ಕೂಡ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ (ಬಿಸಿಸಿಐ) ಬಿಡ್ಡಿಂಗ್‌ಗೆ ಸಂಬಂಧಿಸಿದ ದಾಖಲೆಗಳನ್ನು ಖರೀದಿಸಿವೆ ಎಂದು ವರದಿ ಉಲ್ಲೇಖಿಸಿದೆ.

ಪ್ರಸಾರ ಹಕ್ಕುಗಳ ಮಾರಾಟಕ್ಕೆ ಸಂಬಂಧಿಸಿ ಬಿಸಿಸಿಐಯ ಆಡಳಿತ ಮಂಡಳಿಯು ಜೂನ್‌ 12ರಿಂದ ಆನ್‌ಲೈನ್ ಹರಾಜು ಪ್ರಕ್ರಿಯೆ ಆರಂಭಿಸಲಿದೆ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು