ಗ್ವಾಲಿಯರ್: ಭಾನುವಾರ ಇಲ್ಲಿ ನಡೆಯಲಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಣ ಟಿ20 ಕ್ರಿಕೆಟ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

‘ಬಾಂಗ್ಲಾದೇಶದಲ್ಲಿ ಈಚೆಗೆ ನಡೆದ ರಾಜಕೀಯ ಸಂಘರ್ಷ ಮತ್ತು ಗಲಭೆಗಳಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಲಾಗಿದೆ’ ಎಂದು ಆರೋಪಿಸಿದ್ದ ಬಲಪಂಥೀಯ ಸಂಘಟನೆಗಳು ಪಂದ್ಯ ನಡೆಯದಂತೆ ಅಡ್ಡಿಪಡಿಸುವುದಾಗಿ ಬೆದರಿಕೆ ಹಾಕಿದ್ದವು.

ಇದರಿಂದಾಗಿ ಭದ್ರತೆಗಾಗಿ 2500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

‘ಪಂದ್ಯದ ದಿನ ಮಧ್ಯಾಹ್ನ 2 ಗಂಟೆಯಿಂದಲೇ ನಮ್ಮ ಸಿಬ್ಬಂದಿ ನಗರದ ರಸ್ತೆಗಳಲ್ಲಿ ಕಾರ್ಯನಿರ್ವಹಣೆ ಆರಂಭಿಸುವರು. ಪಂದ್ಯ ವೀಕ್ಷಣೆಗೆ ಬಂದ ಪ್ರತಿಯೊಬ್ಬ ವ್ಯಕ್ತಿಯೂ ಮರಳಿ ತಮ್ಮ ಮನೆ ತಲುಪುವವರೆಗೂ ಕರ್ತವ್ಯ ನಿರ್ವಹಿಸಲಿದ್ದಾರೆ. ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳ ಮೇಲೂ ನಿಗಾ ವಹಿಸಿದ್ದೇವೆ’ ಎಂದು ಗ್ವಾಲಿಯರ್ ವಲಯ ಐ.ಜಿ.ಪಿ ಅರವಿಂದ್ ಸಕ್ಸೆನಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.