ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG: 205 ರನ್‌ಗೆ ಇಂಗ್ಲೆಂಡ್ ಆಲೌಟ್: ಭಾರತಕ್ಕೆ ಆರಂಭಿಕ ಆಘಾತ

Last Updated 4 ಮಾರ್ಚ್ 2021, 10:50 IST
ಅಕ್ಷರ ಗಾತ್ರ

ಅಹಮದಾಬಾದ್: ನರೇಂದ್ರಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 205 ರನ್‌ಗಳಿಗೆ ಆಲೌಟ್ ಆಗಿದೆ.

ಟೀ ವಿರಾಮದ ಹೊತ್ತಿಗೆ 5 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿದ್ದ ಇಂಗ್ಲೆಂಡ್ ತಂಡ ಬಳಿಕ ಪಟಪಟನೆ ವಿಕೆಟ್ ಕಳೆದುಕೊಂಡಿತು. ಭಾರತದ ಕರಾರುವಕ್ ಬೌಲಿಂಗ್ ದಾಳಿಗೆ ತತ್ತರಿಸಿದ ಆಂಗ್ಲ ಬ್ಯಾಟ್ಸ್‌ಮನ್‌ಗಳು ಬಹುಬೇಗ ಪೆವಿಲಿಯನ್ ಸೇರಿಕೊಂಡರು.

ಈ ಪಂದ್ಯದಲ್ಲೂ ಭಾರತದ ಸ್ಪಿನ್ ಬೌಲರ್‌ಗಳು ಅಬ್ಬರಿಸಿದರು. ಅಕ್ಷರ್ ಪಟೇಲ್ 68 ರನ್ ನೀಡಿ 4 ವಿಕೆಟ್ ಉರುಳಿಸಿದರೆ, ಆರ್. ಅಶ್ವಿನ್ 47 ರನ್‌ ನೀಡಿ 3 ವಿಕೆಟ್ ಪಡೆಯುವ ಮೂಲಕ ಮೊದಲ ದಿನದಾಟದಲ್ಲೇ ಆಂಗ್ಲರನ್ನು ಆಲೌಟ್ ಮಾಡಿದರು..

ಬೆಳಿಗ್ಗೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್, ಅದರ ಸಂಪೂರ್ಣ ಪ್ರಯೋಜನ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ. 15 ರನ್ ಮಾಡುವಷ್ಟರಲ್ಲಿ ಆರಂಭಿಕರಾದ ಡಾಮಿನಿಕ್ ಸಿಬ್ಲಿ (2) ಹಾಗೂ ಜ್ಯಾಕ್ ಕ್ರಾಲಿ (2) ಅವರನ್ನು ಕಳೆದ ಪಂದ್ಯದ ಹೀರೊ ಅಕ್ಷರ್ ಪಟೇಲ್ ಪೆವಿಲಿಯನ್‌ಗೆ ಅಟ್ಟಿದರು. ನಾಯಕ ಜೋ ರೂಟ್ ಸಹ 5 ರನ್‌ಗೆ ವಿಕೆಟ್ ಒಪ್ಪಿಸಿದರು.

ಬಳಿಕ ಕ್ರೀಸ್‌ಗೆ ಕಚ್ಚಿ ನಿಂತ ಬೆನ್ ಸ್ಟೋಕ್ಸ್ ಅರ್ಧ ಶತಕ(55) ಸಿಡಿಸಿ ತಂಡಕ್ಕೆ ನೆರವಾದರು. ಡಾನ್ ಲಾರೆನ್ಸ್ 46 ರನ್ ಗಳಿಸಿದರು. ಉಳಿದಂತೆ ಇಂಗ್ಲೆಂಡ್‌ನ ಇತರೆ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಇದೀಗ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿದೆ. ಶುಭಮನ್ ಗಿಲ್(0) ಅಂಡರ್ಸನ್ ಎಲ್‌ಬಿ ಬಲೆಗೆ ಬಿದ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT