ಬೆಂಗಳೂರು (ಪಿಟಿಐ): ಅನುಭವಿ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಅವರು ಗಾಯಗೊಂಡಿರುವ ಮಥೀಷ ಪಥಿರಾಣ ಅವರಿಗೆ ಬದಲಿ ಆಟಗಾರನಾಗಿ ಶ್ರೀಲಂಕಾ ತಂಡವನ್ನು ಸೇರಿಕೊಂಡಿದ್ದಾರೆ.
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಥಿರಾಣ ಅವರ ಭುಜಕ್ಕೆ ಗಾಯವಾಗಿತ್ತು. ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ಸ್ ಎದುರಿನ ಪಂದ್ಯಗಳಲ್ಲಿ ಆಡಿರಲಿಲ್ಲ.
ಶ್ರೀಲಂಕಾ ತಂಡ ವಿಶ್ವಕಪ್ ಟೂರ್ನಿಯ ತನ್ನ ಮುಂದಿನ ಪಂದ್ಯದಲ್ಲಿ ಗುರುವಾರ ಬೆಂಗಳೂರಿನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಮ್ಯಾಥ್ಯೂಸ್ ಅವರಿಗೆ ಇದು ನಾಲ್ಕನೇ ವಿಶ್ವಕಪ್ ಎನಿಸಿದೆ. 2011, 2015 ಮತ್ತು 2019ರ ಟೂರ್ನಿಗಳಲ್ಲಿ ಅವರು ಆಡಿದ್ದರು.
36 ವರ್ಷದ ಅವರು 221 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 5,865 ರನ್ ಕಲೆಹಾಕಿದ್ದು, 120 ವಿಕೆಟ್‌ಗಳನ್ನು ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.