ಗುರುವಾರ , ಮಾರ್ಚ್ 23, 2023
20 °C

ವಿರಾಟ್ ಕೊಹ್ಲಿ ಜನ್ಮದಿನ: ಪತಿಯನ್ನು ‘ಅದ್ಭುತ ವ್ಯಕ್ತಿ’ ಎಂದು ಕೊಂಡಾಡಿದ ಅನುಷ್ಕಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅವರಿಗೆ ಇಂದು (ಶುಕ್ರವಾರ) 33ನೇ ಹುಟ್ಟುಹಬ್ಬದ ಸಂಭ್ರಮ.  

ಕೊಹ್ಲಿ ಹುಟ್ಟುಹಬ್ಬದ ಅಂಗವಾಗಿ ಪತ್ನಿ ಅನುಷ್ಕಾ ಶರ್ಮಾ, ಹಿರಿಯ ಕ್ರಿಕೆಟಿಗರು, ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ), ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ), ಐಪಿಎಲ್‌ ಫ್ರಾಂಚೈಸಿ ಆರ್‌ಸಿಬಿ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಕೋರಿದ್ದಾರೆ.

ಇನ್‌ಸ್ಟಾಗ್ರಾಂ ಖಾತೆಯಲ್ಲಿ ಕೊಹ್ಲಿ ಜೊತೆಗಿನ ಫೋಟೊ ಹಂಚಿಕೊಂಡಿರುವ ಅನುಷ್ಕಾ ಶರ್ಮಾ ಅವರು ಭಾವನಾತ್ಮಕ ಟಿಪ್ಪಣಿಯನ್ನು ಬರೆದುಕೊಂಡಿದ್ದಾರೆ.

‘ನಮ್ಮ ಈ ಫೋಟೊವನ್ನು ನೋಡಿದರೆ ಸಾಕು ನೀವು (ಕೊಹ್ಲಿ) ಜೀವನವನ್ನು ಹೇಗೆ ಮುನ್ನಡೆಸುತ್ತೀರಿ ಎಂಬುದು ತಿಳಿಯುತ್ತದೆ. ಇದಕ್ಕೆ ಯಾವುದೇ ಶೋಧನೆಯ ಅಗತ್ಯವಿಲ್ಲ. ನಿಮ್ಮ ಬದುಕು ಪ್ರಾಮಾಣಿಕತೆ ಮತ್ತು ಧೈರ್ಯದಿಂದ ಕೂಡಿದೆ. ನೀವು ನಿರ್ಭೀತರಾಗಿರುವುದರಿಂದ ಎಲ್ಲ ರೀತಿಯಲ್ಲೂ ಉತ್ತಮವಾಗಿ ಬೆಳೆಯುತ್ತೀರಿ. ನೀವು ಸಾಮಾಜಿಕ ಮಾಧ್ಯಮಗಳಲ್ಲಿ ಈ ರೀತಿಯಾಗಿ ಪರಸ್ಪರ ಮಾತನಾಡುವವರಲ್ಲ ಎಂದು ನನಗೆ ತಿಳಿದಿದೆ. ಆದರೆ, ಜಗತ್ತಿಗೆ ನೀವು ಎಂತಹ ಅದ್ಭುತ ವ್ಯಕ್ತಿ ಎಂದು ಹೇಳಲು ಬಯಸುತ್ತೇನೆ. ನಿಮ್ಮನ್ನು ನಿಜವಾಗಿಯೂ ತಿಳಿದಿರುವವರು ಅದೃಷ್ಟವಂತರು. ಜನ್ಮದಿನದ ಶುಭಾಶಯಗಳು...’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ... ಭಾರತ–ಸ್ಕಾಟ್ಲೆಂಡ್ ಹಣಾಹಣಿ ಇಂದು: ಸುಲಭ ಜಯದ ಮೇಲೆ ವಿರಾಟ್ ಪಡೆ ಕಣ್ಣು

ಇದಕ್ಕೆ ಪ್ರತಿಕ್ರಿಯಿಸಿರುವ ಕೊಹ್ಲಿ, ‘ನೀನೆ ನನ್ನ ಶಕ್ತಿ. ನಾವು ಒಟ್ಟಿಗೆ ಇರುವುದಕ್ಕೆ ಪ್ರತಿದಿನ ದೇವರಿಗೆ ಕೃತಜ್ಞನಾಗಿರುತ್ತೇನೆ. ಸದಾಕಾಲ ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ಹೇಳಿದ್ದಾರೆ.

ಕೊಹ್ಲಿ – ಅನುಷ್ಕಾ ಅವರ ಪೋಸ್ಟ್‌ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತ ಕ್ರಿಕೆಟ್ ತಂಡ ಪ್ರಸ್ತುತ ದುಬೈಯಲ್ಲಿ ನಡೆಯುತ್ತಿರುವ ಟಿ–20 ವಿಶ್ವಕಪ್‌ನಲ್ಲಿ ಆಡುತ್ತಿದೆ. ಕೊಹ್ಲಿ ನೇತೃತ್ವದ ತಂಡ ಇಂದು ಸೂಪರ್ 12 ಹಂತದ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಸೆಣಸಲಿದೆ.

ವಿರಾಟ್ ಕೊಹ್ಲಿ ಈ ವಿಶ್ವಕಪ್ ಬಳಿಕ ಟಿ–20 ನಾಯಕತ್ವವನ್ನು ತ್ಯಜಿಸಲಿದ್ದಾರೆ.

ಇದನ್ನೂ ಓದಿ... T20 WC: ಸ್ಕಾಟ್ಲೆಂಡ್‌ ವಿರುದ್ಧ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು