ಸೋಮವಾರ, ಅಕ್ಟೋಬರ್ 25, 2021
25 °C

ಟಿ–20 ನಾಯಕತ್ವದಿಂದ ನಿರ್ಗಮನ: ವಿರಾಟ್ ನಿರ್ಧಾರಕ್ಕೆ ಅನುಷ್ಕಾ ಹೇಳಿದ್ದೇನು?

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಭಾರತದ ಟಿ-20 ಕ್ರಿಕೆಟ್ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ ಒಂದು ದಿನದ ಬಳಿಕ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನಾಯಕನ ಸ್ಥಾನ ತ್ಯಜಿಸುವ ಬಗ್ಗೆ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದ ಪೋಸ್ಟ್‌ನ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಅವರು, ಹಾರ್ಟ್ ಎಮೋಜಿಯನ್ನು ಹಾಕಿದ್ದಾರೆ. ಈ ಮೂಲಕ ವಿರಾಟ್, ಟಿ–20 ನಾಯಕತ್ವ ತೊರೆದು ತಮ್ಮ ಮೇಲಿನ ಭಾರ ಇಳಿಸಿಕೊಳ್ಳುವ ನಿರ್ಧಾರವನ್ನು ಅನುಷ್ಕಾ ಒಪ್ಪಿಕೊಂಡಿದ್ದಾರೆ.

‘ದುಬೈನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ನಂತರ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ತಂಡಗಳಿಗೆ ಮಾತ್ರ ನಾಯಕನಾಗಿ ಮುಂದುವರಿಯುತ್ತೇನೆ. ಚುಟುಕು ಕ್ರಿಕೆಟ್‌ ತಂಡದಲ್ಲಿ ಬ್ಯಾಟ್ಸ್‌ಮನ್ ಆಗಿ ಉತ್ತಮ ಕಾಣಿಕೆ ಕೊಡುವ ಪ್ರಯತ್ನ ಮಾಡುತ್ತೇನೆ’ಎಂದು 32 ವರ್ಷದ ವಿರಾಟ್ ಬರೆದಿದ್ದರು.

ಈ ವರ್ಷದ ಜನವರಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡಿದ್ದರು. ತಮ್ಮ ಹೆಣ್ಣು ಮಗುವಿಗೆ ವಾಮಿಕಾ ಎಂದು ನಾಮಕರಣ ಮಾಡಿದ್ದರು.

ಶ್ಯಾಂಪೂ ಜಾಹೀರಾತಿನ ಚಿತ್ರಿಕರಣದಲ್ಲಿ ಭೇಟಿಯಾಗಿದ್ದ ವಿರಾಟ್ ಮತ್ತು ಅನುಷ್ಕಾ ನಡುವೆ ಪ್ರೇಮಾಂಕುರವಾಗಿತ್ತು. 2017ರಲ್ಲಿ ಈ ಜೋಡಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಇಟಲಿಯಲ್ಲಿ ವಿವಾಹವಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು