ಕೋಲ್ಕತ್ತ: ಆತಿಥೇಯ ಕೋಲ್ಕತ್ತ ನೈಟ್ರೈಡರ್ಸ್ (ಕೆಕೆಆರ್) ಹಾಗೂ ಲಖನೌ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ತಂಡಗಳು ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಏಪ್ರಿಲ್ 6ರಂದು ಆಡಬೇಕಿರುವ ಪಂದ್ಯ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಅದೇ ದಿನ ರಾಮನವಮಿ ಸಂಭ್ರಮಾಚರಣೆ ಇದ್ದು, ನಗರ ಪೊಲೀಸರಿಂದ ಈವರೆಗೆ ಭದ್ರತೆಯ ಖಾತ್ರಿ ಸಿಕ್ಕಿಲ್ಲ.

ರಾಮನವಮಿ ದಿನದಂದು ಪಶ್ಚಿಮ ಬಂಗಾಳದಾದ್ಯಂತ 20,000ಕ್ಕೂ ಹೆಚ್ಚು ಮೆರವಣಿಗೆ ನಡೆಸಲಾಗುವುದು ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಈಗಾಗಲೇ ಹೇಳಿದ್ದಾರೆ. ಹೀಗಾಗಿ, ಪೊಲೀಸರು ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಿದ್ದಾರೆ.

ನಗರ ಪೊಲೀಸರೊಂದಿಗೆ ಎರಡು ಸುತ್ತು ಮಾತುಕತೆ ನಡೆಸಿರುವ ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ಅಧ್ಯಕ್ಷ ಸ್ನೇಹಶೀಶ್ ಗಂಗೂಲಿ, 'ನಿಗದಿಯಂತೆ ಪಂದ್ಯ ನಡಸಲು ಅಧಿಕಾರಿಗಳಿಂದ ಅನುಮತಿ ದೊರೆತಿಲ್ಲ' ಎಂದು ಹೇಳಿದ್ದಾರೆ.

18ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 22ರಂದು ಆರಂಭವಾಗಲಿದೆ. ಕೋಲ್ಕತ್ತದ ಈಡನ್ ಗಾರ್ಡನ್ಸ್ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ಸೆಣಸಾಟ ನಡೆಸಲಿವೆ.
.Chahal–Dhanashree divorce: ₹ 4.5 ಕೋಟಿ ಜೀವನಾಂಶ ನೀಡಲು ಒಪ್ಪಿದ ಚಾಹಲ್.ಸ್ಟ್ರೈಕ್ರೇಟ್ ಚಿಂತೆ ಬೇಡ, ಸ್ಮಾರ್ಟ್ ಕ್ರಿಕೆಟ್ ಆಡುವಂತೆ ಕೊಹ್ಲಿಗೆ ವಿಲಿಯರ್ಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.