ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಂದೋಕ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 2025ರ ಆಗಸ್ಟ್ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಜೋಡಿಯ ನಿಶ್ಚಿತಾರ್ಥ ನೆರವೇರಿತ್ತು.
.ಪ್ರಧಾನಿ ಮೋದಿ, ರಾಹುಲ್ ಭೇಟಿಯಾದ ಸಚಿನ್ ತೆಂಡೂಲ್ಕರ್: ಅರ್ಜುನ್ ಮದುವೆಗೆ ಆಹ್ವಾನ.ತಂದೆಯನ್ನೇ ಮೀರಿಸಿದ ಮಗ! ಅಪರೂಪದ ಸಾಧನೆ ಮಾಡಿದ ಅರ್ಜುನ್ ತೆಂಡೂಲ್ಕರ್: ಏನದು?.
ಇಂದು (ಮಾರ್ಚ್ 5) ಬಹುಕಾಲದ ಗೆಳತಿ ಸಾನಿಯಾ ಚಾಂದೋಕ್ ಅವರೊಂದಿಗೆ ಅರ್ಜುನ್ ತೆಂಡೂಲ್ಕರ್ ಮದುವೆಯಾಗಿದ್ದಾರೆ. ಮಾರ್ಚ್ 3ರಂದು ಮುಂಬೈನ ಮಹಾಲಕ್ಷ್ಮಿ ರೇಸ್ ಕೋರ್ಸ್ನಲ್ಲಿ ಮೆಹಂದಿ ಸಮಾರಂಭವು ನಡೆದಿತ್ತು. ಸಮಾರಂಭದಲ್ಲಿ ಕ್ರಿಕೆಟ್ ಲೋಕದ ದಂತಕಥೆಗಳು ಉಪಸ್ಥಿತರಿದ್ದರು. ಸಚಿನ್ ಅವರ ಆಪ್ತ ಸ್ನೇಹಿತರು, ಕ್ರಿಕೆಟಿಗರು ಮತ್ತು ಸಿನಿಮಾ ತಾರೆಯರು ಮೆಹಂದಿ ಸಮಾರಂಭದಲ್ಲಿ ಭಾಗಿಯಾಗಿ ನವ ಜೋಡಿ ಶುಭಹಾರೈಸಿದ್ದಾರೆ.

ಮುಂಬೈನಲ್ಲಿ ನಡೆದ ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂದೋಕ್ ಅವರ ವಿವಾಹ ಸಮಾರಂಭಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ದಂಪತಿ, ಮಾಜಿ ಕ್ರಿಕೆಟಿಗ ಮತ್ತು ಆಯ್ಕೆದಾರ ಅಜಿತ್ ಅಗರ್ಕರ್ ಅವರು ತಮ್ಮ ಪತ್ನಿಯೊಂದಿಗೆ ಆಗಮಿಸಿದ್ದರು.

ರಾಹುಲ್ ದ್ರಾವಿಡ್ ಕೂಡ ಪತ್ನಿ ವಿಜೇತಾ ಪೆಂಧಾರ್ಕರ್ ಜೊತೆ ಆಗಮಿಸಿದ್ದರು. ಮಾಜಿ ಕ್ರಿಕೆಟಿಗರಾದ ಕಿರಣ್ ಮೋರೆ, ಅನಿಲ್ ಕುಂಬ್ಳೆ, ಅಜಿಂಕ್ಯ ರಹಾನೆ, ಸುರೇಶ್ ರೈನಾ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಯಾರು ಈ ಸಾನಿಯಾ ಚಂದೋಕ್?

27 ವರ್ಷದ ಸಾನಿಯಾ ಚಂದೋಕ್ ಮುಂಬೈ ಮೂಲದ ಉದ್ಯಮಿಯಾಗಿದ್ದಾರೆ. ಇವರು ಮುಂಬೈನ ಪ್ರಮುಖ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಘಾಯ್ ಕುಟುಂಬವು ಮುಂಬೈನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದೆ. ‘ಇಂಟರ್ ಕಾಂಟಿನೆಂಟಲ್ ಮೆರೈನ್ ಡ್ರೈವ್ ಹೋಟೆಲ್’ ಮತ್ತು ಜನಪ್ರಿಯ ‘ಬ್ರೂಕ್ಲಿನ್ ಕ್ರೀಮರಿ’ ಐಸ್ ಕ್ರೀಮ್ ಬ್ರ್ಯಾಂಡ್ ಘಾಯ್ ಕುಟುಂಬಕ್ಕೆ ಸೇರಿದೆ. ಸಾನಿಯಾ ಅವರು ‘ಮಿ.ಪಾವ್ಸ್ ಪೆಟ್ ಸ್ಪಾ’ ಕಂಪನಿಯ ಸ್ಥಾಪಕರಾಗಿದ್ದಾರೆ. ಇವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ನಿಂದ ಪದವಿ ಪಡೆದಿದ್ದು, ವರ್ಲ್ಡ್ವೈಡ್ ವೆಟರ್ನರಿ ಸರ್ವೀಸ್ನಿಂದ ಪಶುವೈದ್ಯಕೀಯ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಪದವಿಯನ್ನೂ ಪಡೆದಿದ್ದಾರೆ.

26 ವರ್ಷದ ಅರ್ಜುನ್ ತೆಂಡೂಲ್ಕರ್ ಅವರು ತಂದೆಯಂತೆಯೇ ಕ್ರಿಕೆಟಿಗರಾಗಿದ್ದಾರೆ. ರಣಜಿಯಲ್ಲಿ ಗೋವಾ ತಂಡದ ಪರ ಮತ್ತು ಐಪಿಎಲ್ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ಭಾಗವಾಗಿದ್ದಾರೆ. ವಿಶೇಷ ಎಂದರೆ ಅಂಜಲಿ ತೆಂಡೂಲ್ಕರ್ ಅವರು ಸಚಿನ್ ಅವರಿಗಿಂತ 6 ವರ್ಷ ದೊಡ್ಡವರು. ಅರ್ಜುನ್ ಕೂಡ ತಮಗಿಂತ ವಯಸ್ಸಿನಲ್ಲಿ ಹಿರಿಯಯಾಗಿರುವ ಯುವತಿಯನ್ನು ವರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.