ಗೋಲ್ಡ್ ಕೋಸ್ಟ್: ಪ್ರತಿಷ್ಠಿತ ಆ್ಯಷಸ್ ಟೆಸ್ಟ್ನ ಮೊದಲ ಪಂದ್ಯಕ್ಕೆ 15 ಸದಸ್ಯರ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಇದರಲ್ಲಿ ತಾರಾ ಬ್ಯಾಟರ್ ಮಾರ್ನಸ್ ಲ್ಯಾಬುಶೇನ್ ತಂಡಕ್ಕೆ ಮರಳಿದ್ದಾರೆ. ನಿರೀಕ್ಷೆಯಂತೆ ನಾಯಕ ಪ್ಯಾಟ್ ಕಮಿನ್ಸ್ ಮೊದಲ ಟೆಸ್ಟ್ನಿಂದ ಹೊರಗುಳಿದಿದ್ದಾರೆ.

ಜುಲೈ ತಿಂಗಳಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಸರಣಿಯನ್ನು ತಪ್ಪಿಸಿಕೊಂಡಿದ್ದ ಲ್ಯಾಬುಶೇನ್, ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ತೋರಿದ ಬಳಿಕ ಮತ್ತೆ ತಂಡಕ್ಕೆ ಮರಳಿದ್ದಾರೆ. ಇನ್ನೂ ಗಾಯಗೊಂಡ ಕಳೆದ ಕೆಲವು ತಿಂಗಳಿನಿಂದ ವಿಶ್ರಾಂತಿ ಪಡೆದುಕೊಂಡಿರುವ ನಾಯಕ ಪ್ಯಾಟ್ ಕಮಿನ್ಸ್ ಆ್ಯಷಸ್ ಟೆಸ್ಟ್ನ ಮೊದಲ ಟೆಸ್ಟ್ನಿಂದಲೂ ಹೊರಗುಳಿಯಲಿದ್ದಾರೆ. ಅವರ ಬದಲು ತಂಡವನ್ನು ಮಾಜಿ ನಾಯಕ ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ.

ಆರಂಭಿಕ ಬ್ಯಾಟರ್ ಉಸ್ಮಾನ್ ಖ್ವಾಜಾಗೆ ಜೊತೆಯಾಗಿ ಜೇಕ್ ವೆದರಾಲ್ಡ್ ಅವರನ್ನು ಆಯ್ಕೆ ಮಾಡಲಾಗಿದೆ. ಭಾರತ ವಿರುದ್ಧ ಬಾರ್ಡರ್–ಗವಾಸ್ಕರ್ ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸ್ಯಾಮ್ ಕಾನ್ಸ್ಟಾಸ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

31 ವರ್ಷದ ವೆದರಾಲ್ಡ್ ಕಳೆದ ಬೇಸಿಗೆಯಲ್ಲಿ ನಡೆದ ಶೆಫೀಲ್ಡ್ ಶೀಲ್ಡ್ ಪಂದ್ಯಾವಳಿಯಲ್ಲಿ 50.33 ಸರಾಸರಿಯಲ್ಲಿ 906 ರನ್ ಗಳಿಸಿ ಗರಿಷ್ಠ ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು.

ಆ್ಯಷಸ್ ಸರಣಿಗೆ ಆಸ್ಟ್ರೇಲಿಯಾ ತಂಡ

ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಬ್ರೆಂಡನ್ ಡಾಗೆಟ್, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚೆಲ್ ಸ್ಟಾರ್ಕ್, ಜೇಕ್ ವೆದರಾಲ್ಡ್, ಬ್ಯೂ ವೆಬ್ಸ್ಟರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
.Steve Smith: ಏಕದಿನ ಕ್ರಿಕೆಟ್ಗೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ನಿವೃತ್ತಿ.ಆ್ಯಷಸ್ ಸರಣಿಯ ಮೊದಲ ಪಂದ್ಯದಿಂದ ಕಮಿನ್ಸ್ ಹೊರಕ್ಕೆ: ಸ್ಮಿತ್ಗೆ ನಾಯಕತ್ವ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.