ಮುಂಬೈ: ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ ಅವರಿಗೆ ಬ್ಯಾಟ್ ರಿಪೇರಿ ಮಾಡಿಕೊಡುತ್ತಿದ್ದ ಅಶ್ರಫ್ ಚೌಧರಿಗೆ ಕೋವಿಡ್–19 ಸೋಂಕು ತಗುಲಿರುವುದು ಖಚಿತವಾಗಿದೆ.

ಅವರು ಕ್ರಿಕೆಟಿಗರ ವಲಯದಲ್ಲಿ ಅಶ್ರಫ್ ಚಾಚಾ ಎಂದೇ ಚಿರಪರಿಚಿತರಾಗಿದ್ದಾರೆ. 60 ವರ್ಷ ವಯಸ್ಸಿನ ಅವರನ್ನು ಚೆಂಬೂರಿನಲ್ಲಿರುವ ಉಪನಗರ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಂತರ ಸಚಿನ್ ತೆಂಡೂಲ್ಕರ್ ಮನವಿ ಮೇರೆಗೆ ಸೆವೆನ್ ಹಿಲ್ಸ್ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

‘ಅಶ್ರಫ್ ಅವರಿಗೆ ಕೋವಿಡ್ –19 ಇರುವುದು ಖಚಿತವಾಗಿದೆ. ತೆಂಡೂಲ್ಕರ್ ನನ್ನೊಂದಿಗೆ ಚರ್ಚಿಸಿದ್ದಾರೆ. ಅಶ್ರಫ್ ಅವರನ್ನು ಸೆವೆನ್ ಹಿಲ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಉತ್ತಮ ಚಿಕಿತ್ಸೆ ನೀಡಲು ಮನವಿ ಮಾಡಿಕೊಂಡಿದ್ದರು. ಅವರನ್ನು ಸವೆನ್ ಹಿಲ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಆಸ್ಪತ್ರೆಯ ರೇಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ. ಭುಜಂಗ್ ಪೈ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.