ನವದೆಹಲಿ (ಪಿಟಿಐ): ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಟ್ವೆಂಟಿ–20 ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಬುಧವಾರ ನಡೆದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಸಭೆಯಲ್ಲಿ 15 ಆಟಗಾರರನ್ನು ಆಯ್ಕೆ ಮಾಡಲಾಯಿತು. 34 ವರ್ಷದ ಅಶ್ವಿನ್ 2017ರ ನಂತರ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಆಡಿಲ್ಲ.
ಯುವ ವಿಕೆಟ್‌ಕೀಪರ್ ಇಶಾನ್ ಕಿಶನ್, ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ ಅವರಿಗೆ ಸ್ಥಾನ ಲಭಿಸಿದೆ. ಇಶಾನ್ ಮತ್ತು ವರುಣ್ ಅವರು ಕಳೆದ ಐಪಿಎಲ್‌ನಲ್ಲಿ ಮಾಡಿದ ಸಾಧನೆಯ ಆಧಾರದಲ್ಲಿ ಆಯ್ಕೆಯಾಗಿದ್ದಾರೆ.
ಅಕ್ಟೋಬರ್ 17ರಿಂದ ಟಿ20 ವಿಶ್ವಕಪ್ ಟೂರ್ನಿಯು ಯುಎಇ ಮತ್ತು ಓಮನ್‌ನಲ್ಲಿ ನಡೆಯಲಿದೆ. ಭಾರತವೇ ಈ ಟೂರ್ನಿಗೆ ಆತಿಥ್ಯ ವಹಿಸಲಿದೆ.
ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್‌ಕೀಪರ್), ಇಶಾನ್ ಕಿಶನ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ರಾಹುಲ್ ಚಾಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.