ಸಿಡ್ನಿ: ಭಾರತ ತಂಡದ ಮಾಜಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಳೆದ ವರ್ಷದ ಕೊನೆಯಲ್ಲಿ ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದರು. ಇದೀಗ ಅವರು ಮುಂಬರುವ ಬಿಗ್ ಬ್ಯಾಷ್ ಲೀಗ್ (ಬಿಬಿಎಲ್) ನಲ್ಲಿ ಸಿಡ್ನಿ ಥಂಡರ್ ತಂಡದ ಪರ ಆಡಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಮುಂಬರುವ ಬಿಬಿಎಲ್ ಆವೃತ್ತಿಯಲ್ಲಿ ಸಿಡ್ನಿ ಥಂಡರ್ ತಂಡದ ಪರ ಕಣಕ್ಕಿಳಿಯಲು ಅಶ್ವಿನ್ ಸಜ್ಜಾಗಿದ್ದಾರೆ. ಆ ಮೂಲಕ ಈ ಟೂರ್ನಿಯಲ್ಲಿ ಭಾಗವಹಿಸಲಿರುವ ಉನ್ನತ ಮಟ್ಟದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಕಳೆದ ವರ್ಷ ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಹೇಳಿದ್ದ ಅವರು, 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬಳಿಕ ಇತ್ತೀಚೆಗೆ ಐಪಿಎಲ್ನಿಂದಲೂ ನಿವೃತ್ತಿ ತೆಗೆದುಕೊಂಡಿದ್ದಾರೆ. ಇದೀಗ ಅವರು ‘ಸಿಡ್ನಿ ಥಂಡರ್ ತಂಡದ ಪರ ಕಣಕ್ಕಿಳಿಯಲಿದ್ದಾರೆ‘ ಎಂದು 'ಫಾಕ್ಸ್ ಸ್ಪೋರ್ಟ್ಸ್' ವರದಿ ಮಾಡಿದೆ.

ಈ ವಾರದ ಕೊನೆಯಲ್ಲಿ ಸಿಡ್ನಿ ಥಂಡರ್ ಫ್ರಾಂಚೈಸಿ ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆಯಿದೆ. ಅಶ್ವಿನ್ ಐಎಲ್ಟಿ–20 ಹರಾಜಿನಲ್ಲಿ ಭಾಗವಹಿಸಿದ್ದು, ಜನವರಿ 4 ರಂದು ಹರಾಜು ಮುಕ್ತಾಯಗೊಂಡ ಬಳಿಕ ಡಿ.14 ರಿಂದ ಜನವರಿ 18 ರವರೆಗೆ ನಡೆಯುವ ಈ ಋತುವಿನ ಕೊನೆಯ ಭಾಗದಲ್ಲಿ ಅವರು ಥಂಡರ್ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ.

ಕಳೆದ ತಿಂಗಳು ಐಪಿಎಲ್ನಿಂದ ನಿವೃತ್ತಿ ಪಡೆದುಕೊಂಡ ಬಳಿಕ ಅವರು ವಿದೇಶಿ ಟಿ–20 ಲೀಗ್ಗಳಲ್ಲಿ ಆಡಲು ಅರ್ಹತೆ ಪಡೆದುಕೊಂಡಿದ್ದಾರೆ. ಅಂದಹಾಗೆ ರಾಷ್ಟ್ರೀಯ ಅಥವಾ ಐಪಿಎಲ್ನಲ್ಲಿ ತೊಡಗಿಸಿಕೊಂಡಿರುವಾಗ ಭಾರತೀಯ ಆಟಗಾರರು ವಿದೇಶಿ ಲೀಗ್ಗಳಲ್ಲಿ ಭಾಗವಹಿಸುವುದನ್ನು ಬಿಸಿಸಿಐ ನಿಷೇಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.