ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯಾ ಕಪ್‌ 2018: ಪಾಕ್‌ ವಿರುದ್ಧ ಗೆದ್ದ ಬಾಂಗ್ಲಾ, ಫೈನಲ್‌ಗೆ ಲಗ್ಗೆ

ನಾಲ್ಕನೇ ವಿಕೆಟ್‌ಗೆ 144 ರನ್‌ಗಳ ಜೊತೆಯಾಟ; 99 ರನ್‌ ಗಳಿಸಿ ಔಟಾದ ಮುಷ್ಫಿಕುರ್ ರಹೀಮ್‌
Last Updated 26 ಸೆಪ್ಟೆಂಬರ್ 2018, 20:05 IST
ಅಕ್ಷರ ಗಾತ್ರ

ಅಬುಧಾಬಿ: ಬಾಂಗ್ಲಾದೇಶ ತಂಡ ಏಷ್ಯಾಕಪ್‌ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 37 ರನ್‌ಗಳಜಯ ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ 48.5 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡು 239 ರನ್‌ ಕಲೆ ಹಾಕಿತು. ಈ ಸಾಧಾರಣ ಗುರಿ ಬೆನ್ನತ್ತಿದ ಪಾಕಿಸ್ತಾನ ಆರಂಭಿಕ ಆಘಾತ ಎದುರಿಸಿತು. ಇಮಾಮುಲ್‌ ಹಕ್‌ ಜೊತೆ ಇನಿಂಗ್ಸ್‌ ಆರಂಭಿಸಿದ ಫಕರ್‌ ಜಮಾನ್‌ ಕೇವಲ ಒಂದು ರನ್‌ ಗಳಿಸಿ ಮೆಹದಿ ಹಸನ್‌ಗೆ ವಿಕೆಟ್‌ ಒಪ್ಪಿಸಿದರು.

ಬಳಿಕ ಬಂದ ಬಾಬರ್‌ ಅಜಂ ಕೂಡ ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿಕೊಂಡರು.

ಒಂದೆಡೆ ವಿಕೆಟ್‌ಗಳು ಉರುಳುತಿದ್ದರೂ ತಾಳ್ಮೆ ಆಟ ಪ್ರದರ್ಶಿಸಿದ ಇಮಾಮುಲ್‌ ಹಕ್‌(83ರನ್‌) ತಂಡಕ್ಕೆ ಗೆಲುವು ತಂದುಕೊಡುವಲ್ಲಿ ವಿಫಲವಾದರು.

ಅಂತಿಮವಾಗಿ ಪಾಕಿಸ್ತಾನ ತಂಡ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು209ರನ್‌ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ 37 ರನ್‌ ಅಂತರದಿಂದ ಗೆದ್ದ ಬಾಂಗ್ಲಾದೇಶ ತಂಡ ಫೈನಲ್‌ಗೇರಿತು.ಫೈನಲ್‌ ಪಂದ್ಯ ಸೆಪ್ಟೆಂಬರ್‌ 28 ರಂದು ನಡೆಯಲಿದ್ದು, ಭಾರತದೊಂದಿಗೆ ಸೆಣಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT