ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Asia Cup-2022 | 6 ವರ್ಷಗಳ ಬಳಿಕ ಮತ್ತೆ ಬೌಲಿಂಗ್‌ ಮಾಡಿದ ವಿರಾಟ್‌ ಕೊಹ್ಲಿ 

Last Updated 1 ಸೆಪ್ಟೆಂಬರ್ 2022, 2:55 IST
ಅಕ್ಷರ ಗಾತ್ರ

ದುಬೈ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಬುಧವಾರ ಏಷ್ಯಾಕಪ್ 2022 ಟೂರ್ನಿಯ ಹಾಂಗ್‌ ಕಾಂಗ್‌ ವಿರುದ್ಧದ ಪಂದ್ಯದಲ್ಲಿ ಒಂದು ಓವರ್‌ ಬೌಲ್ ಮಾಡಿ ಗಮನ ಸೆಳೆದರು.

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ 17ನೇ ಓವರ್‌ನಲ್ಲಿ ಬೌಲಿಂಗ್‌ ಮಾಡಿದ್ದ ಅವರು 6 ರನ್‌ ನೀಡಿದರು. 2016ರ ನಂತರ ಇದೇ ಮೊದಲ ಬಾರಿಗೆ ಕೊಹ್ಲಿ ಟಿ20 ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ 25.2 ಓವರ್‌ಗಳನ್ನು ಬೌಲ್ ಮಾಡಿರುವ ವಿರಾಟ್‌ ಕೊಹ್ಲಿ 204 ರನ್‌ ನೀಡಿ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ.

ಹಾಂಕಾಂಗ್‌ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 40 ರನ್ ಅಂತರದ ಗೆಲುವು ದಾಖಲಿಸಿತ್ತು. ಇದರೊಂದಿಗೆ 'ಸೂಪರ್ –4' ಹಂತಕ್ಕೆ ಪ್ರವೇಶಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ, ಸೂರ್ಯಕುಮಾರ್ ಯಾದವ್‌ ಹಾಗೂ ಕೊಹ್ಲಿ ಅರ್ಧಶತಕಗಳ ನೆರವಿನಿಂದ ಎರಡು ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತ್ತು. ಬಳಿಕ ಗುರಿ ಬೆನ್ನಟ್ಟಿದ ಹಾಂಗ್‌ ಕಾಂಗ್ ಐದು ವಿಕೆಟ್ ನಷ್ಟಕ್ಕೆ 152 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ಕೊಹ್ಲಿ ಹಾಗೂ ಸೂರ್ಯಕುಮಾರ್ 42 ಎಸೆತಗಳಲ್ಲಿ 98 ರನ್‌ಗಳ ಜೊತೆಯಾಟ ಕಟ್ಟಿದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT