ಪಲೇಕೆಲೆ (ಶ್ರೀಲಂಕಾ): ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಭಾರತ ಮತ್ತು ನೇಪಾಳ ತಂಡಗಳು ಗೆಲುವಿಗಾಗಿ ಸೆಣಸಾಟ ನಡೆಸುತ್ತಿವೆ.
ಪಲೇಕೆಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ, ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ನೇಪಾಳ 48.2 ಓವರ್‌ಗಳಲ್ಲಿ 230 ರನ್ ಗಳಿಸಿ ಆಲೌಟ್ ಆಯಿತು.
ನೇಪಾಳ ಪರ ಆಸಿಫ್ ಶೇಖ್ 58, ಸೋಂಪಾಲ್ ಕಾಮಿ 48, ಕುಶಾಲ್ ಭುರ್ಟೆಲ್ 38, ದೀಪೇಂದ್ರ ಸಿಂಗ್ ಐರಿ 29, ಗುಲ್ಸನ್ ಝಾ 23 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ಟೀಮ್ ಇಂಡಿಯಾ ಪರ ರವೀಂದ್ರ ಜಡೇಜ, ಮೊಹಮ್ಮದ್ ಸಿರಾಜ್ ತಲಾ ಮೂರು ವಿಕೆಟ್ ಪಡೆದರೆ, ಮೊಹ್ಮಮದ್ ಶಮಿ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.