ಕೊಲಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿರುವ ಭಾರತ ಏಷ್ಯಾ ಕಪ್ ಮುಡಿಗೇರಿಸಿಕೊಂಡಿದೆ.
ಈ ಮೂಲಕ ದಾಖಲೆಯ 8ನೇ ಸಲ ಟ್ರೋಫಿ ಎತ್ತಿ ಹಿಡಿದಿದೆ.
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಆದರೆ ಮೊಹಮ್ಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಲಂಕಾ ಕೇವಲ 15.2 ಓವರ್‌ಗಳಲ್ಲಿ 50 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.
ಜೀವನಶ್ರೇಷ್ಠ ಬೌಲಿಂಗ್ ಸಾಧನೆ ಮಾಡಿದ ಸಿರಾಜ್ ಏಳು ಓವರ್‌ಗಳಲ್ಲಿ 21 ರನ್ ತೆತ್ತು ಆರು ವಿಕೆಟ್ ಕಬಳಿಸಿದರು. ಇದರಲ್ಲಿ ಒಂದೇ ಓವರ್‌ನಲ್ಲಿ ಮೇಡನ್ ಸಹಿತ ನಾಲ್ಕು ವಿಕೆಟ್ ಕಬಳಿಸಿದರು. ಹಾರ್ದಿಕ್ ಪಾಂಡ್ಯ ಮೂರು ಹಾಗೂ ಜಸ್‌ಪ್ರೀತ್ ಬೂಮ್ರಾ ಒಂದು ವಿಕೆಟ್ ಕಬಳಿಸಿದರು.
ಬಳಿಕ ಗುರಿ ಬೆನ್ನಟ್ಟಿದ ಭಾರತ 6.1 ಓವರ್‌ಗಳಲ್ಲಿ ಗೆಲುವಿನ ದಡ ಸೇರಿತು. ಶುಭಮನ್ ಗಿಲ್ 27 ಹಾಗೂ ಇಶಾನ್ ಕಿಶನ್ 23 ರನ್ ಗಳಿಸಿ ಔಟಾಗದೆ ಉಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.