ದುಬೈ: ಪಾಕಿಸ್ತಾನ ವಿರುದ್ಧ ನಡೆದ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ತಂಡ ಇನ್ನೂ 7 ಎಸೆತಗಳು ಬಾಕಿ ಇರುವಂತೆ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅಬ್ಬರದ ಅರ್ಧಶತಕ ಸಿಡಿಸುವ ಮೂಲಕ ಯುವರಾಜ್ ಸಿಂಗ್ ಅವರ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಮುರಿದಿದ್ದಾರೆ.

ಟೀಂ ಇಂಡಿಯಾ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ಗಳಿಸಿತು. 172 ರನ್ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತದ ಪರವಾಗಿ ಅಬ್ಬರದ ಬ್ಯಾಟಿಂಗ್ ನಡೆಸಿದ ಅಭಿಷೇಕ್ ಶರ್ಮಾ ಕೇವಲ 39 ಎಸೆತಗಳಲ್ಲಿ 74 ರನ್ ಸಿಡಿಸಿ ಮಿಂಚಿದರು. ಇದರಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್ ಸೇರಿದ್ದವು.

ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದ ಅಭಿಷೇಕ್ ಶರ್ಮಾ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದರು. ಆ ಮೂಲಕ ಪಾಕಿಸ್ತಾನದ ವಿರುದ್ಧ ಟಿ–20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದರು. ಇದಕ್ಕೂ ಮೊದಲು ಈ ದಾಖಲೆ ಮಾಜಿ ಆಟಗಾರ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು.
.ಭಾರತ–ಪಾಕಿಸ್ತಾನ ನಡುವೆ ಪೈಪೋಟಿಯೇ ಇಲ್ಲ: ಸೂರ್ಯಕುಮಾರ್ ಯಾದವ್ ಹೀಗೆ ಹೇಳಿದ್ಯಾಕೆ?.Asia Cup: ಅಭಿಷೇಕ್, ಗಿಲ್ ಅಬ್ಬರಕ್ಕೆ ಬೆಚ್ಚಿದ ಪಾಕ್.
ಯುವರಾಜ್ ಸಿಂಗ್ ಪಾಕಿಸ್ತಾನದ ವಿರುದ್ಧ 2012 ರಲ್ಲಿ ಅಹಮದಾಬಾದ್ನಲ್ಲಿ ನಡೆದಿದ್ದ ಪಂದ್ಯದಲ್ಲಿ 29 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದು ಪಾಕ್ ವಿರುದ್ಧ ಇದುವರೆಗೂ ದಾಖಲಾಗಿದ್ದ ಅತೀ ವೇಗದ ಅರ್ಧಶತಕವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.