ಗುರುವಾರ , ಆಗಸ್ಟ್ 13, 2020
28 °C

ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿ ಮುಂದಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿದ್ದ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯನ್ನು ಕೋವಿಡ್‌ ಬಿಕ್ಕಟ್ಟಿನಿಂದಾಗಿ ಮುಂದೂಡಲಾಗಿದೆ.

ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ (ಎಸಿಸಿ) ಗುರುವಾರ ಈ ತೀರ್ಮಾನ ಕೈಗೊಂಡಿದೆ.

‘ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಈ ಸಂಬಂಧ ಎಸಿಸಿ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಚರ್ಚಿಸಲಾಗಿದೆ. ಆಟಗಾರರು ಸೇರಿದಂತೆ ಎಲ್ಲರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ವರ್ಷದ ಜೂನ್‌ವರೆಗೂ ಟೂರ್ನಿ ನಡೆಸದಿರಲು ನಿರ್ಧರಿಸಲಾಗಿದೆ’ ಎಂದು ಎಸಿಸಿ ಟ್ವೀಟ್‌ ಮಾಡಿದೆ.

ಪಾಕಿಸ್ತಾನವು ಈ ಬಾರಿಯ ಏಷ್ಯಾಕಪ್‌ ಟೂರ್ನಿಯ ಆತಿಥ್ಯ ವಹಿಸಬೇಕಿತ್ತು. ಭದ್ರತೆಯ ಬಗ್ಗೆ ತಕರಾರು ಎತ್ತಿದ್ದ ಕೆಲ ತಂಡಗಳು ಪಾಕ್‌ ನೆಲದಲ್ಲಿ ಪಂದ್ಯಗಳನ್ನು ಆಡಲು ನಿರಾಕರಿಸಿದ್ದವು. ಹೀಗಾಗಿ ಶ್ರೀಲಂಕಾದಲ್ಲಿ ಕ್ರಿಕೆಟ್‌ ಟೂರ್ನಿ ಆಯೋಜಿಸುವ ಬಗ್ಗೆ ಎಸಿಸಿ ಚಿಂತಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು